Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪಕ್ಷದೊಳಗಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು, ಗೊಂದಲಗಳು ಈಗ ಸಂಪೂರ್ಣವಾಗಿ ಅಂತ್ಯಗೊAಡಿವೆ; ಬಿ.ವೈ.ವಿಜಯೇಂದ್ರ


ಮೈಸೂರು : ಬಿಜೆಪಿ ಪಕ್ಷದೊಳಗಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಹಾಗೂ ಗೊಂದಲಗಳು ಈಗ ಸಂಪೂರ್ಣವಾಗಿ ಅಂತ್ಯಗೊAಡಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಗುರುವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ನಡೆದಿರುವುದು ಸೇರಿದಂತೆ ಎಲ್ಲಾ ಪ್ರಮುಖ ಬೆಳವಣಿಗೆಗಳ ಕುರಿತು ದೆಹಲಿಯ ವರಿಷ್ಠರಿಗೆ ಸಮಗ್ರ ಮಾಹಿತಿ ನೀಡಲಾಗಿದೆ. ಈ ವಿಚಾರವನ್ನು ಮತ್ತೆ ಸಾರ್ವಜನಿಕವಾಗಿ ಚರ್ಚಿಸುವ ಅಗತ್ಯವಿಲ್ಲ ಎಂದರು.
ಇದೇ ವೇಳೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರದ್ದು ಎಂದು ಹೇಳಲಾದ ವೈರಲ್ ಆಡಿಯೋ ಕುರಿತು ಪ್ರತಿಕ್ರಿಯಿಸಿ, , ಆ ಧ್ವನಿ ತಮ್ಮದಲ್ಲ ಎಂದು ಸ್ವತಃ ಸದಾನಂದಗೌಡರೇ ಸ್ಪಷ್ಟನೆ ನೀಡಿದ್ದಾರೆ ಎಂದು ಹೇಳಿದರು. ಶಾಸಕ ಎಸ್.ಆರ್. ವಿಶ್ವನಾಥ್ ಅವರ ಜೊತೆಗೆ ಸಹ ಈ ಬಗ್ಗೆ ಚರ್ಚಿಸಲಾಗಿದೆ. ದೊಡ್ಡ ಪಕ್ಷದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಸಹಜವಾಗಿದ್ದು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.ಬಿಡದಿ ಟೌನ್‌ಶಿಪ್ ಯೋಜನೆ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸರ್ಕಾರ ತನ್ನ ನಿಲುವಿನಲ್ಲಿ ಹಠಮಾರಿ ಧೋರಣೆ ತಳೆದಿದೆ. ಶೇ.79ರಷ್ಟು ಸ್ಥಳೀಯ ರೈತರ ವಿರೋಧ ಇದ್ದರೂ, ಸರ್ಕಾರ ಯಾವುದೇ ವಿರೋಧವಿಲ್ಲ ಎಂದು ಹೇಳುತ್ತಿರುವುದು ಸರಿಯಲ್ಲ ಎಂದು ಟೀಕಿಸಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರಕ್ಕೆ ಬಂದ ದಿನದಿಂದಲೇ ಈ ಯೋಜನೆಗೆ ತೀವ್ರ ಆಸಕ್ತಿ ತೋರಿಸುತ್ತಿದ್ದಾರೆ. ಮುಂಬರುವ ಜಂಟಿ ಅಧಿವೇಶನದಲ್ಲಿ ಬಿಜೆಪಿ ಈ ವಿಷಯವನ್ನು ಗಂಭೀರವಾಗಿ ಕೈಗೆತ್ತಿಕೊಳ್ಳಲಿದೆ ಎಂದು ಹೇಳಿದರು. ರೈತರ ಪರವಾಗಿ ಸರ್ಕಾರದ ವಿರುದ್ಧ ವಿಸ್ತöÈತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.