Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮೈಸೂರು: 2026-27ನೇ ಶೈಕ್ಷಣಿಕ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಮೈಸೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಖಾಲಿ ಇರುವ ಆಂಗ್ಲ ಭಾಷೆ, ದೈಹಿಕ ಶಿಕ್ಷಣ, ಕಂಪ್ಯೂಟರ್ ಶಿಕ್ಷಣ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಈ ಸಂಬAಧ ನಿಗಧಿತ ವಿದ್ಯಾರ್ಹತೆಯನ್ನು ಹೊಂದಿರುವ (ಪದವಿ, ಬಿ.ಇಡಿ. ಮತ್ತು ಟಿ.ಇ.ಟಿ ವಿದ್ಯಾರ್ಹತೆ) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಜುಲೈ 9 ರ ಒಳಗೆ ಅಗತ್ಯ ದಾಖಲೆಗಳೊಂದಿಗೆ ಜಂಟಿ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಮೈಸೂರು ಜಿಲ್ಲೆ ಇಲ್ಲಿಗೆ ಅರ್ಜಿ ಸಲ್ಲಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.