Skip to main content

3Kaala News

ಸುಭಾಷಿತ 

ಬದುಕೆಂಬುದು ಚೈನಿನ ಸರಪಳಿ ಇದ್ದ ಹಾಗೆ. ಪ್ರತಿಕೊಂಡಿಯೂ ಗಟ್ಟಿಯಾಗಿರಬೇಕು. ಕೊಂಡಿಗಳ ನಡುವೆ ಬಿರುಕು ಬಿಟ್ಟಾಗ ಗಟ್ಟಿಯಾದ ಬೆಸುಗೆಗಳನ್ನು ನಿರಂತರವಾಗಿ ಹಾಕುತ್ತಿರಬೇಕು. ನಮ್ಮ ದೌರ್ಬಲ್ಯಗಳನ್ನು ಮೆಟ್ಟಿನಿಂತು; ಆದಮ್ಯ ಆತ್ಮವಿಶ್ವಾಸದಿಂದ ನಮ್ಮ ಶಕ್ತಿ ಮತ್ತು ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು. 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಉಚಿತ ಅಣುಕು ಪರೀಕ್ಷೆಗೆ ನೋಂದಣಿ ಅವಧಿ ವಿಸ್ತರಣೆ
ಮೈಸೂರು: ಕರ್ನಾಟಕ ರಾಜ್ಯ ಪೋಲೀಸ್ ಇಲಾಖಾ ನೇಮಕಾತಿ ಸಮಿತಿಯವರು ಸಿವಿಲ್ ಕಾನ್ಸ್ಟೇಬಲ್, ಸಿಎಆರ್, ಡಿಎಆರ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗಾಗಿ ರಾಜ್ಯಾದ್ಯಂತ ನಡೆಸುತ್ತಿರುವ ಲಿಖಿತ ಪರೀಕ್ಷೆಗೆ ಹಾಜರಾಗುತ್ತಿರುವ ಅಭ್ಯರ್ಥಿಗಳಿಗೆ ನಗರದ ಪೀಪಲ್ಸ್ ಪಾರ್ಕ್ ಬಳಿಯಿರುವ ನಗರ ಕೇಂದ್ರ ಗ್ರಂಥಾಲಯದಲ್ಲಿ ನಡೆಸಲು ಉದ್ದೇಶಿಸಿರುವ ಅಣಕು ಪರೀಕ್ಷೆಯ ನೋಂದಣಿ ಅವದಿಯನ್ನು ವಿಸ್ತರಿಸಲಾಗಿದೆ. ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಹೆಸರನ್ನು ನೋಂದಾಯಿಸಿಕೊಳ್ಳುವ ಕೊನೆಯ ದಿನಾಂಕವನ್ನು ಜುಲೈ 4 ರ ಬದಲಾಗಿ ಜುಲೈ 06, ರವರೆಗೆ ವಿಸ್ತರಿಸಲಾಗಿದ್ದು, ಅಣಕು ಪರೀಕ್ಷೆಗಳನ್ನು ಜುಲೈ 7 ರಿಂದ ನಡೆಸಲಾಗುತ್ತದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ವಿಸ್ತರಣೆಗೊಂಡ ಕೊನೆಯ ದಿನಾಂಕದೊಳಗೆ ನೋಂದಾಯಿಸಿಕೊಳ್ಳಬಹುದೆAದು ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.