Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಎಸ್‌ಐಆರ್ ಆರಂಭ ಹಿನ್ನಲೆ; ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅಪರ ಜಿಲ್ಲಾಧಿಕಾರಿ


ಎಚ್.ಡಿ.ಕೋಟೆ; ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಜಿಲ್ಲೆಯಲ್ಲಿ ಚುರುಕುಗೊಂಡಿದ್ದು, ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯಾ ಅವರು ಇಂದು ಎಚ್.ಡಿ.ಕೋಟೆಯ ವಿವಿಧ ಗ್ರಾಮಗಳ ಮನೆ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಎಚ್.ಡಿ.ಕೋಟೆಯ ಸರಗೂರು, ಪುರದಕಟ್ಟೆ ಹಾಡಿ, ಹೊಮ್ಮರಗಳ್ಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದರೊಂದಿಗೆ ಖುದ್ದು ಬಿ.ಎಲ್ ಒ ಗಳೊಂದಿಗೆ ಕೆಲವು ಮನೆಗಳಿಗೆ ಎನ್ಯೂಮರೇಷನ್ ಫಾರಂ ವಿತರಣೆ ಮಾಡಿದರು.
ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿ.ಎಲ್.ಒ.) ಜುಲೈ 29 ರವರೆಗೆ ಮನೆ-ಮನೆಗೆ ಭೇಟಿ ನೀಡಿ ಮತದಾರರಿಗೆ (ಇಟಿumeಡಿಚಿಣioಟಿ) ನಮೂನೆಗಳನ್ನು ವಿತರಿಸುತ್ತಿದ್ದಾರೆ. ಬಿ.ಎಲ್.ಒ.ಗಳು ಭೇಟಿ ನೀಡಿದ ಸಂದರ್ಭದಲ್ಲಿ ಮತದಾರರು ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ನಮೂನೆಗಳನ್ನು ಹಿಂತಿರುಗಿಸಿ ಸಹಕರಿಸಬೇಕು ಎಂದು ಮನವಿ ಮಾಡಿದರು.