Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಗದ್ದಿಗೆ ಮುಖ್ಯ ರಸ್ತೆಗೆ ಎಸ್.ಜಾನಕಿಯವರ ಹೆಸರಿಡಿ


ಮೈಸೂರು; ಮೈಸೂರಿನಲ್ಲಿ ನಿಧನರಾದ ಖ್ಯಾತ ಗಾಯಕಿ ಎಸ್. ಜಾನಕಿ ಅವರ ಹೆಸರನ್ನು ಗದ್ದಿಗೆ ಮುಖ್ಯ ರಸ್ತೆಗೆ ನಾಮಕರಣ ಮಾಡಬೇಕೆಂದು ಎಸ್.ಜಾನಕಿಯವರ ಕೇರ್ ಟೇಕರ್ ನವೀನ್ ಸರ್ಕಾರ ಹಾಗೂ ಮೈಸೂರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮನವಿಯನ್ನು ಸಿಎಂ ಈಡೇರಿಸಿದರೆ, ಜಾನಕಿ ಅವರಿಗೆ ಮೈಸೂರು ಮೇಲಿದ್ದ ಪ್ರೀತಿ ಸಾರ್ಥಕವಾಗಲಿದೆ ಎಂದು ಹೇಳಿದರು.
ತಮ್ಮ ಬಗ್ಗೆ ಸಾರ್ವಜನಿಕವಾಗಿ ಅಪಪ್ರಚಾರ ನಡೆಯುತ್ತಿದೆ ಎಂದು ತಿಳಿದಾಗ ಜಾನಕಮ್ಮನವರು ತೀವ್ರ ಬೇಸರಗೊಂಡಿದ್ದರು. ಜನಗಳ ಮಧ್ಯೆ ಇರಲು ಇಷ್ಟವಿಲ್ಲ ಎಂದು ಹೇಳಿ, ಕಾಡಿಗೆ ಹೋಗಿ ಬಿಡುತ್ತೇನೆ ಎಂಬAತಹ ಮಾತುಗಳನ್ನು ಕೂಡ ಆಡಿದ್ದರು ಎಂಬುದನ್ನು ಅವರು ನೆನಪಿಸಿಕೊಂಡರು.

ಸಂಗೀತ ನಿರ್ದೇಶಕ ಇಳಯರಾಜ ಸಂತಾಪ
ಹಿರಿಯ ಗಾಯಕಿ ಎಸ್. ಜಾನಕಿ ಅವರ ನಿಧನಕ್ಕೆ ಸಂಗೀತ ನಿರ್ದೇಶಕ ಇಳಯರಾಜ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಲಂಡನ್‌ನಿAದ ವೀಡಿಯೊ ಮೂಲಕ ಮಾತನಾಡಿರುವ ಅವರು, ಜಾನಕಿ ಅವರ ನಿಧನದ ಸುದ್ದಿ ಕೇಳಿ ತಮಗೆ ಅತ್ಯಂತ ದುಃಖ ಮತ್ತು ಆಘಾತವಾಗಿದೆ.ಜೀವನದಲ್ಲಿ ಅಸಹನೀಯ ದುಃಖಗಳನ್ನು, ಸಹಿಸಲಾಗದ ಘಟನೆಗಳನ್ನು ಸಹಿಸಿಕೊಂಡು ಅವರು ಬದುಕಿದರು ಎಂಬುದು ಅತ್ಯಂತ ವೇದನೆಯ ವಿಷಯ ಎಂದು ಸ್ಮರಿಸಿದ್ದಾರೆ.
ಅವರು ಅತ್ಯಂತ ಕಠಿಣ ಪರಿಶ್ರಮಿ. ಜಾನಕಿ ಅವರ ಅಗಲಿಕೆ ಭಾರತೀಯ ಚಲನಚಿತ್ರ ಸಂಗೀತ ಲೋಕಕ್ಕೆ ಒಂದು ದೊಡ್ಡ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸೋದಾಗಿ ತಿಳಿಸಿದ್ದಾರೆ.