Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಚಾಮುಂಡೇಶ್ವರಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ


ಮೈಸೂರು; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಇಂದು ನಾಡ ಶಕ್ತಿ ದೇವತೆ ಬೆಟ್ಟದ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.
ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಅವರು ದೇವಸ್ಥಾನಕ್ಕೆ ತೆರಳಿ ಜಗನ್ಮಾತೆ ಶ್ರೀಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ನಾಡಿನ ಅನ್ನದಾತ ರೈತರಿಗೆ ಹಾಗೂ ಜನತೆಗೆ ಒಳಿತಾಗಲೆಂದು ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಗ್ರಾಮಾಂತರ ನಿಕಟಪೂರ್ವ ಅಧ್ಯಕ್ಷ ಎಲ್.ಆರ್ ಮಹದೇವಸ್ವಾಮಿ ಹಾಗೂ ಅರ್ಚಕ ಸುನೀಲ್ ಉಪಸ್ಥಿತರಿದ್ದರು.