Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಈ ಬಾರಿಯೂ ದಸರಾವನ್ನು ವಿಜೃಂಭಣೆಯಿ0ದಲೇ ಆಚರಿಸಲು ತೀರ್ಮಾನಿಸಲಾಗಿದೆ; ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ


ಮೈಸೂರು; ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಇರುವುದರಿಂದ ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾವನ್ನು ಸರಳವಾಗಿ ಆಚರಿಸಬೇಕೆಂಬ ಅಭಿಪ್ರಾಯಗಳು ಕೇಳಿಬಂದಿದ್ದವು. ಆದರೆ ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಚರ್ಚೆಯ ಬಳಿಕ, ಪ್ರತಿವರ್ಷದಂತೆ ಈ ಬಾರಿಯೂ ದಸರಾವನ್ನು ಸಡಗರ ಮತ್ತು ವಿಜೃಂಭಣೆಯಿAದಲೇ ಆಚರಿಸಲು ತೀರ್ಮಾನಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತಿಂದ್ರ ಸಿದ್ದರಾಮಯ್ಯ ಹೇಳಿದರು.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗದ ಸಾಂಸ್ಕöÈತಿಕ ಕ್ರೀಡೆಯಾದ ಕಂಬಳವನ್ನು ಕೇವಲ ಆ ಭಾಗಕ್ಕೆ ಸೀಮಿತಗೊಳಿಸದೆ, ಇಡೀ ರಾಜ್ಯದ ಜನರಿಗೆ ಪರಿಚಯಿಸುವ ಉದ್ದೇಶವಿದೆ. ಈ ನಿಟ್ಟಿನಲ್ಲಿ ಮೈಸೂರು ದಸರಾದಲ್ಲಿ ಕಂಬಳವನ್ನು ಆಯೋಜಿಸಲು ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಬಹುತೇಕ ಶಾಸಕರು ಮತ್ತು ಸದಸ್ಯರು ಒಲವು ವ್ಯಕ್ತಪಡಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ದಸರಾ ಆರಂಭವಾಗುವುದಕ್ಕಿAತ ಮುಂಚಿತವಾಗಿಯೇ ಮೈಸೂರು ನಗರದ ರಸ್ತೆಗಳ ರಿಪೇರಿ ಹಾಗೂ ಹೊಸ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬoಧಪಟ್ಟ ಎಂಜಿನಿಯರ್ಗಳಿಗೆ ಸೂಚನೆ ನೀಡಲಾಗಿದೆ ಎಂದರು.
ದಸರಾ ಶಾಶ್ವತ ಪ್ರಾಧಿಕಾರ ರಚನೆ ಮಾಡಬೇಕೆಂಬ ಬೇಡಿಕೆ ಪ್ರತಿ ವರ್ಷದಂತೆ ಈ ಬಾರಿಯೂ ಬಂದಿದ್ದು, ಮುಖ್ಯಮಂತ್ರಿಗಳು ಇದನ್ನು ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ.
ದಸರಾ ಸಂದರ್ಭದಲ್ಲಿ ಉಪಸಮಿತಿಗಳನ್ನು ರಚಿಸುವಾಗ ಪಕ್ಷದ ಕಾರ್ಯಕರ್ತರನ್ನು ಸೇರಿಸುವ ವಿಷಯದಲ್ಲಿ ಉಂಟಾಗುವ ಗೊಂದಲಗಳನ್ನು ಈ ಬಾರಿ ನಿವಾರಿಸಲಾಗುವುದು. ಆದಷ್ಟು ಬೇಗ ಸಮಿತಿಗಳನ್ನು ರಚಿಸಿ ನಿಯಮಿತ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸದಸ್ಯರನ್ನಾಗಿ ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುವುದು. ಹಿಂದಿನ ಎಲ್ಲಾ ಸರ್ಕಾರಗಳೂ ತಮ್ಮ ಪಕ್ಷದ ಕಾರ್ಯಕರ್ತರಿಗೆ ಇಂತಹ ಮಂಡಳಿ ಹಾಗೂ ಸಮಿತಿಗಳಲ್ಲಿ ಅವಕಾಶ ನೀಡುವುದು ಸಹಜ ಪ್ರಕ್ರಿಯೆಯಾಗಿದ್ದು, ಈ ಬಾರಿಯೂ ಅದನ್ನೇ ಪಾಲಿಸಲಾಗುವುದು ಎಂದು ತಿಳಿಸಿದರು.

ಪೋಟೋ ಕ್ಯಾಪ್ಸನ್
ನಗರಾಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತಿಂದ್ರ ಸಿದ್ದರಾಮಯ್ಯ ಅವರು ಶುಕ್ರವಾರ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ಅಲ್ಲಿ ಭಕ್ತರಿಗೆ ವಿತರಿಸಲಾಗುತ್ತಿರುವ ಪ್ರಸಾದದ ಗುಣಮಟ್ಟವನ್ನು ಕೇಸರಿಬಾತ್ ಸೇವಿಸುವ ಮೂಲಕ ಪರಿಶೀಲಿಸಿದರು.