Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್‌ರಿಂದ ಎಸ್.ಐ.ಆರ್. ಪ್ರಕ್ರಿಯೆ ಪ್ರಗತಿ ಪರಿಶೀಲನೆ


ಮೈಸೂರು; ರಾಜ್ಯದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಗಳ ಪ್ರಗತಿ ಪರಿಶೀಲಿಸಿದರು.
ಬಿ.ಎಲ್.ಓ ಗಳು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕತೆಯಿಂದ ನಿರ್ವಹಿಸಬೇಕು. ಮತದಾರರ ನೋಂದಣಾಧಿಕಾರಿಗಳು ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆಯ ಪ್ರಕ್ರಿಯೆಯನ್ನು ಪರಿಶೀಲಿಸಬೇಕು. ಎಸ್.ಐ.ಆರ್ ಕಾರ್ಯವನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಗಂಭೀರವಾಗಿ ಪರಿಗಣಿಸಿ ಹೆಚ್ಚಿನ ನಿಗಾ ವಹಿಸಿ ಕೆಲಸ ನಿರ್ವಹಿಸಬೇಕು ಎಂದರು.
ದೋಷರಹಿತ ಹಾಗೂ ಗುಣಮಟ್ಟದ ಮತದಾರರ ಪಟ್ಟಿಯನ್ನು ಸಿದ್ದಪಡಿಸುವ ನಿಟ್ಟಿನಲ್ಲಿ ವಿವರಗಳನ್ನು ಅತ್ಯಂತ ಎಚ್ಚರಿಕೆಯಿಂದ ಪರಿಶೀಲಿಸಬೇಕು. ಯಾವ ಮತಗಟ್ಟೆಗಳಲ್ಲಿ ಕಡಿಮೆ ಪ್ರಗತಿ ಆಗಿದೆಯೋ ಅಂತಹ ಪ್ರದೇಶಗಳ ಕಡೆ ಹೆಚ್ಚಿನ ಗಮನಹರಿಸಿ ಸೂಕ್ತ ಮಾರ್ಗದರ್ಶನ ನೀಡಿ ಪ್ರಗತಿ ವೇಗವಾಗಿ ಆಗುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಿ ಎಂದರು.
ಮತದಾರರ ನೋಂದಣಾಧಿಕಾರಿಗಳು ನೋಂದಾಯಿತ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಸಿ ಹಾಗೂ ಬಿ.ಎಲ್.ಒ ಗಳು ನೋಂದಾಯಿತ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಂದ ನೇಮಕ ಮಾಡಿರುವ ಬಿ.ಎಲ್.ಎ-2 ಗಳೊಂದಿಗೆ ಸಭೆ ನಡೆಸಿ ಎಸ್‌ಐಆರ್ ಕಾರ್ಯದ ಪ್ರಗತಿ ವರದಿಯನ್ನು ಹಾಗೂ ಎಎಸ್‌ಡಿಡಿಒ (ಗೈರು, ಸ್ಥಳಾಂತರ, ಮರಣ, ಪುನರಾವರ್ತಿತ, ಇತರೆ) ಎಂದು ಗುರುತು ಮಾಡಿರುವ ಮತದಾರರ ವಿವರಗಳನ್ನು ಪ್ರತಿವಾರ ನೀಡುವಂತೆ ಸೂಚನೆಯನ್ನು ನೀಡಿದರು.
ಮುಂದಿನ ಹಂತದಲ್ಲಿ ಪರಿಷ್ಕರಣೆಯ ಕಾರ್ಯವನ್ನು ಕೈಗೊಳ್ಳುವ ಕುರಿತು, ನಿಗದಿತ ಕಾಲಮಿತಿಯಲ್ಲಿ ಪರಿಷ್ಕರಣೆಯ ಕಾರ್ಯಗಳನ್ನು ಪೂರ್ಣಗೊಳಿಸಲು ಸೂಚನೆಗಳನ್ನು ನೀಡಿದರು.ಪರಿಷ್ಕರಣೆಯ ಕಾರ್ಯದ ಸಂಬAಧ ಜಿಲ್ಲೆಯ ಮತದಾರರ ನೋಂದಣಾಧಿಕಾರಿಗಳು ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಗಳಲ್ಲಿ ಇದ್ದ ಗೊಂದಲಗಳು ಹಾಗೂ ಪ್ರಶ್ನೆಗಳಿಗೆ ಪರಿಹಾರಗಳನ್ನು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಲಕ್ಷಿ÷್ಮÃಕಾಂತ್ ರೆಡ್ಡಿ.ಜಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ
ಯುಕೇಶ್ ಕುಮಾರ್.ಎಸ್, ಮೈಸೂರು ಮಹಾನಗರಪಾಲಿಕೆ ಆಯುಕ್ತೆ ಎಂ.ಕೆ. ಸವಿತ, ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಮತದಾರರ ನೋಂದಣಾಧಿಕಾರಿಗಳು ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಜರಿದ್ದರು.