Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸೋನಂ ವಾಂಗ್ಚುಕ್ ಸೇರಿದಂತೆ ಹಲವು ವಿದ್ಯಾರ್ಥಿಗಳ ಬಲವಂತದ ಬಂಧನ ಖಂಡಿಸಿ ವಿವಿಧ ಸಂಘ, ಸಂಸ್ಥೆಗಳಿ0ದ ಪ್ರತಿಭಟನೆ


ಮೈಸೂರು: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಶಾಂತಿಯುತವಾಗಿ ಸತ್ಯಾಗ್ರಹ ನಡೆಸುತ್ತಿದ್ದ ಸೋನಂ ವಾಂಗ್ಚುಕ್ ಸೇರಿದಂತೆ ಹಲವು ವಿದ್ಯಾರ್ಥಿಗಳ ಬಲವಂತದ ಬಂಧನ ಖಂಡಿಸಿ ಮಂಗಳವಾರ ನಗರದ ವಿವಿಧೆಡೆ ವಿವಿಧ ಸಂಘ, ಸಂಸ್ಥೆಗಳಿAದ ಪ್ರತಿಭಟನೆ ನಡೆಸಲಾಯಿತು.
ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಭಾರತ ವಿದ್ಯಾರ್ಥಿ ಫೆಡರೇಷನ್‌ನ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು.
ಮೇ 3ರಂದು ನಡೆದ ನೀಟ್ ಯುಜಿ ಪರೀಕ್ಷೆಯಲ್ಲಿ ಸುಮಾರು 22 ಲಕ್ಷ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಆದರೆ ರಾಜಸ್ಥಾನದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಟಿಎ ಪರೀಕ್ಷೆ ರದ್ದುಗೊಳಿಸಿ ಮರುಪರೀಕ್ಷೆ ನಡೆಸಿದೆ. ಈ ಗೊಂದಲಗಳಿAದಾಗಿ ದೇಶಾದ್ಯಂತ ಇದುವರೆಗೆ 21 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕಿಡಿ ಕಾರಿದರು.
ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಕಳೆದ 20 ದಿನಗಳಿಂದ ಶಾಂತಿಯುತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಂ ವಾಂಗ್ಚುಕ್ ಮತ್ತು ವಿದ್ಯಾರ್ಥಿಗಳನ್ನು ಪೊಲೀಸರ ಮೂಲಕ ಬಲವಂತವಾಗಿ ಬಂಧಿಸಿರುವುದು ಸಂವಿಧಾನಬದ್ಧ ಹಕ್ಕುಗಳ ಮೇಲಿನ ದಾಳಿ. ಜು.21ರಂದು ಆಯೋಜಿಸಲಾಗಿದ್ದ ವಿದ್ಯಾರ್ಥಿಗಳ ಪಾರ್ಲಿಮೆಂಟ್ ಚಲೋ ಚಳವಳಿಯ ಮೇಲೆ ಲಾಠಿ ಚಾರ್ಜ್ ಹಾಗೂ ಅಶ್ರುವಾಯು ಬಳಸುವ ಮೂಲಕ ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕಲು ಸರ್ಕಾರ ಯತ್ನಿಸಿದೆ ಎಂದು ಆರೋಪಿಸಿದರು.
ಪರೀಕ್ಷೆಯ ಗೊಂದಲಗಳಿAದಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಪದೇ ಪದೇ ಪರೀಕ್ಷಾ ನಿರ್ವಹಣೆಯಲ್ಲಿ ವಿಫಲವಾಗುತ್ತಿರುವ ಎನ್‌ಟಿಎ ಸಂಸ್ಥೆಯನ್ನು ರದ್ದುಗೊಳಿಸಬೇಕು. ನೀಟ್ ಪರೀಕ್ಷೆಯನ್ನು ಬ್ಯಾನ್ ಮಾಡಬೇಕು. ಇಡೀ ನೀಟ್ ಹಗರಣದ ಕುರಿತು ಉನ್ನತ ಮಟ್ಟದ ನ್ಯಾಯಾಂಗ ತನಿಖೆಯಾಗಬೇಕು. ಪರೀಕ್ಷಾ ಅಕ್ರಮ ಮತ್ತು ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಹೊಣೆ ಹೊತ್ತು ದೇಶದ ಪ್ರಧಾನ ಮಂತ್ರಿಗಳು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ?ಅಸಮರ್ಥ ಕೇಂದ್ರೀಕರಣ ವ್ಯವಸ್ಥೆಯನ್ನು ಕೈಬಿಟ್ಟು, ಶಾಂತಿಯುತ ಪ್ರತಿಭಟನೆಗಳಿಗೆ ಸರ್ಕಾರ ಸೂಕ್ತ ಸಂವಾದದ ಮೂಲಕ ಸ್ಪಂದಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಅಭಿ, ವಿಜಯಕುಮಾರ್, ರಾಘವೇಂದ್ರ, ಶಶಿಕಲಾ, ಪ್ರಕಾಶ್, ರತಿರಾವ್, ರೂಪರಾವ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಕಾಂಗ್ರೆಸ್‌ನಿAದ ಪ್ರತಿಭಟನೆ ;
ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ, ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ವಿಫಲವಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ಸಮಿತಿ ವತಿಯಿಂದ ಪುರಭವನ ಮುಂಭಾಗದ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಜಿಲ್ಲಾ ಕಾಂಗ್ರೆಸ್ ವಕ್ತಾರ ಎಸ್. ರಾಜೇಶ್ ಮಾತನಾಡಿ, ನೀಟ್ ಪರೀಕ್ಷೆ ಬರೆದಿರುವ 20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಇಂದು ಡೋಲಾಯಮಾನವಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಶಾಂತಿಯುತವಾಗಿ ಹೋರಾಟ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆಸಿರುವುದು ಕೇಂದ್ರ ಸರ್ಕಾರದ ಸರ್ವಾಧಿಕಾರಿ ಹಾಗೂ ಗೂಂಡಾಗಿರಿ ಧೋರಣೆ ತೋರಿಸುತ್ತದೆ ಎಂದು ಕಿಡಿಕಾರಿದರು.
ಶಿಕ್ಷಣ ಕ್ಷೇತ್ರದಲ್ಲಾಗಿರುವ ಈ ಅಕ್ರಮಕ್ಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ತಕ್ಷಣವೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು .
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ನಾಸೀರ್, ಪುಟ್ಟರಾಜು, ರವಿ, ಸೈಯದ್ ಫಾರೂಕ್, ಮಂಜು, ಸುನಿಲ್ ನಾರಾಯಣ್, ರಹೀಂ, ರಂಗಸ್ವಾಮಿ, ರವಿ, ರಾಮು.ಕೆ, ನಂಜುAಡಸ್ವಾಮಿ, ರವಿನಾಯ್ಕ, ಮೋಹನ್ ಕುಮಾರ್, ಶ್ರೀನಿವಾಸ್, ರವಿ ಕಾಳೇಗೌಡ, ಧನಪಾಲ್, ಕೇಶವ್, ಬಾಬು ಸೇರಿದಂತೆ ಹಲವರು ಭಾಗವಹಿಸಿದ್ದರು.
ಎಐಡಿಎಸ್‌ಒ, ಎಐಡಿವೈಒ ಹಾಗೂ ಎಐಎಂಎಸ್‌ಎಸ್ ಸಂಘಟನೆಗಳಿAದ ಪ್ರತಿಭಟನೆ ;
ಸಂಸತ್ ಚಲೋ ಕಾರ್ಯಕ್ರಮದ ಭಾಗವಾಗಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಯುವಜನರ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಮತ್ತು ಅಶ್ರುವಾಯು ದಾಳಿ ಖಂಡಿಸಿ ಎಐಡಿಎಸ್‌ಒ, ಎಐಡಿವೈಒ ಹಾಗೂ ಎಐಎಂಎಸ್‌ಎಸ್ ಸಂಘಟನೆಗಳ ಜಂಟಿ ಆಶ್ರಯದಲ್ಲಿ ನಗರದ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಎಐಡಿಎಸ್‌ಒ ಜಿಲ್ಲಾಧ್ಯಕ್ಷೆ ಚಂದ್ರಕಲಾ ಮಾತನಾಡಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿಗಳು ಮತ್ತು ಯುವಕರು ಮುಂಚಿತವಾಗಿಯೇ ಸಂಸತ್ ಮೆರವಣಿಗೆ ಘೋಷಿಸಿದ್ದರು. ಆದರೆ, ಪೊಲೀಸರು ಅನುಮತಿ ನಿರಾಕರಿಸಿ, ದೌರ್ಜನ್ಯ ಎಸಗಿದ್ದಾರೆ. ಪ್ರಜಾಪ್ರಭುತ್ವ ಸಮಾಜದಲ್ಲಿ ಪ್ರತಿಭಟನೆ ಮಾಡುವುದು ಪ್ರತಿಯೊಬ್ಬರ ಮೂಲಭೂತ ಹಕ್ಕು. ಕಾನೂನು ಜನಸಾಮಾನ್ಯರ ಅಗತ್ಯಗಳಿಗೆ ಸ್ಪಂದಿಸದಿದ್ದಾಗ, ಅದು ಅನ್ಯಾಯದ ಸಾಧನವಾಗುತ್ತದೆ. ಅಂತಹ ಕಾನೂನನ್ನು ಕಿತ್ತೆಸೆಯುವುದೇ ವಿದ್ಯಾರ್ಥಿ ಸಂಸ್ಕöÈತಿ. ಅನ್ಯಾಯವೇ ಆಳ್ವಿಕೆಯಾದಾಗ ಪ್ರತಿಭಟನೆ ಅನಿವಾರ್ಯ. ಈ ಅಪ್ರಜಾಸತ್ತಾತ್ಮಕ ಪೊಲೀಸ್ ಕೃತ್ಯದ ವಿರುದ್ಧ ದೇಶದ ಸಮಗ್ರ ವಿದ್ಯಾರ್ಥಿ ಸಮುದಾಯ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.
ಎಐಎಂಎಸ್‌ಎಸ್ ಜಿಲ್ಲಾ ಉಪಾಧ್ಯಕ್ಷೆ ಸೀಮಾ ಮಾತನಾಡಿ, ಕೇಂದ್ರ ಮಟ್ಟದ ಪರೀಕ್ಷೆಗಳಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸಂಪೂರ್ಣ ವಿಫಲರಾಗಿದ್ದಾರೆ. ಅವರು ತಕ್ಷಣವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು. ದೆಹಲಿಯಲ್ಲಿ ಹೆಣ್ಣುಮಕ್ಕಳ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಖಂಡನೀಯ ಎಂದು ಕಿಡಿ ಕಾರಿದರು.
ಎಐಡಿವೈಒ ಜಿಲ್ಲಾಧ್ಯಕ್ಷ ಸುನಿಲ್ ಮಾತನಾಡಿ, ದೆಹಲಿಯಲ್ಲಿ ಯುವಜನತೆಯ ಮೇಲೆ ನಡೆದಿರುವುದು ಅಮಾನುಷ ದಾಳಿ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ನಡೆಯುತ್ತಿರುವ ಚಳವಳಿಯನ್ನು ಹತೋಟಿಗೆ ತರಲು ಸರ್ಕಾರ ಯತ್ನಿಸುತ್ತಿದೆ. ಭ್ರಷ್ಟಾಚಾರ ಬಗೆಹರಿಸುವ ಬದಲು ವಿದ್ಯಾರ್ಥಿ ಸಮುದಾಯದ ಮೇಲೆ ತಮಗಿರುವ ನಿರ್ಲಕ್ಷ÷್ಯವನ್ನು ಸರ್ಕಾರ ಎತ್ತಿಹಿಡಿದಿದೆ. ಪರೀಕ್ಷೆಗಳನ್ನು ನಡೆಸಲು ವಿಫಲವಾಗಿರುವ ಎನ್‌ಟಿಎ ಸಂಸ್ಥೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ನಿತಿನ್, ಪದಾಧಿಕಾರಿಗಳಾದ ಸುಮಾ, ಆಸಿಯಾ, ಪುಷ್ಪ, ಸ್ವಾತಿ, ಚಂದ್ರಿಕಾ, ಹೇಮಾ, ದಿಶಾ, ಅಂಜಲಿ, ಅಭಿಷೇಕ್, ನಂದೀಶ್ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕನ್ನಡಾಂಬೆ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ; ಮತ್ತೊಂದೆಡೆ ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯವನ್ನು ಖಂಡಿಸಿ, ಕನ್ನಡಾಂಬೆ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.