Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕಬಿನಿ ಜಲಾಶಯದಲ್ಲಿ ನೀರಿನ ಅಭಾವ: ಜಲಾಶಯ ನೀರಿಗೆ ಅವಲಂಬಿತರಾಗಿ ಬೆಳೆ ಬೆಳೆಯಬೇಡಿ


ಮೈಸೂರು; 2026-27 ನೇ ಸಾಲಿನ ಜೂನ್ 1 ರಿಂದ ಜುಲೈ 20 ರವರೆಗೆ ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ, ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣ ತೀವ್ರವಾಗಿ ಕುಸಿದಿದೆ. ಪ್ರಸ್ತುತ ಕಬಿನಿ ಜಲಾಶಯದಲ್ಲಿ ಕುಡಿಯುವ ನೀರಿಗಾಗಿ 9.83 ಟಿ.ಎಂ.ಸಿ ಹಾಗೂ ಕೃಷಿ ಚಟುವಟಿಕೆಗಳಿಗಾಗಿ 2.75 ಟಿ.ಎಂ.ಸಿ ನೀರು ಮಾತ್ರ ಬಳಕೆಗೆ ಲಭ್ಯವಿದೆ.
ರಾಜ್ಯಾದ್ಯಂತ ಎಲ್ ನಿನೊ ಪರಿಣಾಮ ಹಾಗೂ ಜಲಾಶಯಗಳ ಒಳಹರಿವು ಶೂನ್ಯಕ್ಕೆ ಇಳಿದಿರುವ ಬರದ ಪರಿಸ್ಥಿತಿಯ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸುಧೀರ್ಘ ಚರ್ಚೆ ನಡೆಸಿದ ಬಳಿಕ, ಜಲಾಶಯ ನಂಬಿಕೊAಡು ಯಾವ ರೈತರೂ ಬೆಳೆ ಹಾಕಬೇಡಿ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ ಮತ್ತು ರಾಜ್ಯ ಜಲ ನೀತಿಯನ್ವಯ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕಾಗಿರುವುದರಿಂದ, ಪ್ರಾದೇಶಿಕ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳ ಸಹಯೋಗದೊಂದಿಗೆ ಮುಂಬರುವ ದಿನಗಳಲ್ಲಿ ನೀರಿನ ಅಭಾವ ಉಂಟಾಗದAತೆ ಕೇವಲ ಕುಡಿಯುವ ಉದ್ದೇಶಕ್ಕೆ ಮಾತ್ರ ನೀರನ್ನು ಸದ್ಬಳಕೆ ಮಾಡಲು ನಿರ್ಧರಿಸಲಾಗಿದೆ.
ಸದ್ಯದ ಪರಿಸ್ಥಿತಿಯಲ್ಲಿ ಕೃಷಿಗೆ ನೀರು ಒದಗಿಸಲು ಸಾಧ್ಯವಿಲ್ಲದಿರುವುದರಿಂದ ಕಬಿನಿ ಅಚ್ಚುಕಟ್ಟು ವ್ಯಾಪ್ತಿಯ ರೈತರು ಜಲಾಶಯದ ನೀರನ್ನು ಅವಲಂಬಿಸಿ ಯಾವುದೇ ಬೆಳೆಗಳನ್ನು ಬೆಳೆಯದೆ ಸರ್ಕಾರದ ಸೂಚನೆಗೆ ಸಹಕರಿಸಬೇಕಾಗಿ ಕಬಿನಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಅಧೀಕ್ಷಕ ಇಂಜಿನಿಯರ್ ಕೆ.ಕೆ. ರಘುಪತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.