Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಒಂದು ವಾರ ಕಾಲ ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ಗಾಂಧಿ ಶಿಲ್ಪ ಬಜಾರ್ ಕರಕುಶಲ ಮೇಳ


ಮೈಸೂರು; ನಗರದ ಹೆಬ್ಬಾಳ್‌ನಲ್ಲಿರುವ ಜೆ ಎಸ್ ಎಸ್ ಮೈಸೂರು ಅರ್ಬನ್ ಹಾತ್ ನಲ್ಲಿ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ- ಗಾಂಧೀ ಶಿಲ್ಪ ಬಜಾರ್‌ನ್ನು ಜುಲೈ 28 ರಿಂದ ಮೇ 3ರ ತನಕ ಆಯೋಜಿಸಲಾಗಿದೆ ಎಂದು ಜೆಎಸ್‌ಎಸ್ ಮಹಾವಿದ್ಯಾಪೀಠದ ತಾಂತ್ರಿಕ ಶಿಕ್ಷಣ ವಿಭಾಗದ ಉಪನಿರ್ದೇಶಕ ಬಿ.ಇಳಂಗೋವನ್ ತಿಳಿಸಿದರು.
ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಆಯುಕ್ತರು (ಕರಕುಶಲ), ಜವಳಿ ಸಚಿವಾಲಯ, ಭಾರತ ಸರ್ಕಾರ, ನವದೆಹಲಿ ಕಚೇರಿಯ ಪ್ರಾಯೋಜಕತ್ವದಲ್ಲಿ, ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್ ನ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ಗಾಂಧಿ ಶಿಲ್ಪ ಬಜಾರ್ ಮೇಳವನ್ನು 50 ಮಳಿಗೆಗಳಲ್ಲಿ ಆಯೋಜನೆ ಮಾಡಲಾಗಿದೆ. ದೇಶದ ವಿವಿಧ ರಾಜ್ಯಗಳ ಕರಕುಶಲಕರ್ಮಿಗಳು ಹಾಗೂ ಕೈಮಗ್ಗ ನೇಕಾರರು ಕರಕುಶಲ ಮತ್ತು ಕೈಮಗ್ಗ ಉತ್ಪನ್ನಗಳನ್ನು ಪ್ರದರ್ಶನ ಮತ್ತು ಮಾರಾಟ ಮಾಡಲಿದ್ದಾರೆ ಎಂದು ಹೇಳಿದರು.
ಈ ಮೇಳದಲ್ಲಿ ಮುಖ್ಯವಾಗಿ ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ತೆಲಂಗಾಣ ಹಾಗೂ ಪುದುಚೇರಿ ಪ್ರದೇಶಗಳ ಪ್ರಸಿದ್ಧ ಕರಕುಶಲ ಮತ್ತು ಕೈಮಗ್ಗ ಉತ್ಪನ್ನಗಳಾದ ಚನ್ನಪಟ್ಟಣದ ಗೊಂಬೆಗಳು, ಮರದ ಕೆತ್ತನೆ ಕಲಾವಸ್ತುಗಳು, ಕಂಚಿನ ವಿಗ್ರಹಗಳು, ಕಲಾಂಕಾರಿ ಚಿತ್ರಕಲೆ, ಬಾಟಿಕ್, ಕಂಚೀಪುರA ಹಾಗೂ ಹತ್ತಿ ಸೀರೆಗಳು, ಇಮಿಟೇಶನ್ ಆಭರಣಗಳು, ಮಣ್ಣಿನ ಕಲಾವಸ್ತುಗಳು, ಚರ್ಮದ ಕಲಾತ್ಮಕ ವಸ್ತುಗಳು, ಬಿದಿರು-ಬೆತ್ತದ ಉತ್ಪನ್ನಗಳು ಸೇರಿದಂತೆ ವಿವಿಧ ಕರಕುಶಲ ಹಾಗೂ ಕೈಮಗ್ಗ ಉತ್ಪನ್ನಗಳ ವಿಶೇಷ ಪ್ರದರ್ಶನ ಮತ್ತು ಮಾರಾಟ ಏರ್ಪಡಿಸಲಾಗಿದೆ.”
ಮಧ್ಯವರ್ತಿಗಳು ಇಲ್ಲದೆ ಕರಕುಶಲಕರ್ಮಿಗಳಿಂದ ಗ್ರಾಹಕರಿಗೆ ನೇರವಾಗಿ ಕೈಗೆಟಕುವ ಬೆಲೆಯಲ್ಲಿ ಲಭ್ಯವಾಗಲಿದೆ. ಗಾಂಧಿ ಶಿಲ್ಪ ಬಜಾರ್ ಮೇಳದಲ್ಲಿ ಭಾಗವಹಿಸುತ್ತಿರುವ ಕುಶಲಕರ್ಮಿಗಳಿಗೆ ಉಚಿತವಾಗಿ ಮಳಿಗೆಗಳನ್ನು ನೀಡಲಾಗುವುದು. ಜತೆಗೆ, ಪ್ರಯಾಣ ಭತ್ಯೆ, ದಿನಭತ್ಯೆನ್ನೂ ಕರಕುಶಲ ಅಭಿವೃದ್ಧಿ ಅಯುಕ್ತರ ಕಚೇರಿಯಿಂದ ನೀಡಲಾಗುವುದು.
ಈ ಗಾಂಧೀ ಶಿಲ್ಪ ಬಜಾರ್ ಮೇಳದ ಉದ್ಘಾಟನೆಯನ್ನು ಜುಲೈ 28 ರಂದು ಮಂಗಳವಾರ ಸಂಜೆ 4 ಗಂಟೆಗೆ ನಡೆಯಲಿದೆ.
ಈ ಪ್ರದರ್ಶನ ಹಾಗೂ ಮಾರಾಟ ಆಗಸ್ಟ್ 3 ರ ವರೆಗೆ ನಡೆಯಲಿದ್ದು, ಬೆಳಿಗ್ಗೆ ಗಂಟೆ 10.30 ರಿಂದ ರಾತ್ರಿ 9.00ರವರೆಗೆ ಉಚಿತವಾಗಿ ತೆರೆದಿರುತ್ತದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಜೆಎಸ್‌ಎಸ್ ಅರ್ಬನ್ ಹಾತ್ ಸಂಯೋಜಕ ರಾಕೇಶ್ ರೈ ಎ, ಜವಳಿ ಮಂತ್ರಾಲಯದ ಕರಕುಶಲ ಕೇಂದ್ರದ ಸಹಾಯಕ ನಿರ್ದೇಶಕ ಮಂಜುಸ್ವಾಮಿ ಡಿ.ಟಿ. ಉಪಸ್ಥಿತರಿದ್ದರು.