Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಶಾಲಾ-ಕಾಲೇಜುಗಳಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಮೂಡಿಸಿ: ಸಿ.ಮಲ್ಲಿಕ್


ಮೈಸೂರು: ಶಾಲಾ-ಕಾಲೇಜುಗಳಲ್ಲಿ ವಾರಕ್ಕೊಮ್ಮೆ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಆಯೋಜಿಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ. ಮಲ್ಲಿಕ್ ತಿಳಿಸಿದರು.
ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ನಾರ್ಕೋ ಸಮನ್ವಯ ಕೇಂದ್ರದ ಜಿಲ್ಲಾ ಮಟ್ಟದ ಜಿಲ್ಲಾ ಕಮಿಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ಅವರು,
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಓಅಃ) ಅಭಿವೃದ್ಧಿಪಡಿಸಿರುವ ಒಂಓAS Poಡಿಣಚಿಟ (ತಿತಿತಿ.ಟಿಛಿbmಚಿಟಿಚಿs.gov.iಟಿ), ಟೋಲ್-ಫ್ರೀ ಸಂಖ್ಯೆ 1933 ಹಾಗೂ ಇಮೇಲ್ (iಟಿಜಿo.ಟಿಛಿbmಚಿಟಿಚಿs@gov.iಟಿ) ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಮಾದಕ ವಸ್ತುಗಳ ಮಾರಾಟ ಅಥವಾ ಕಳ್ಳಸಾಗಾಣಿಕೆ ಬಗ್ಗೆ ಯಾವುದೇ ಮಾಹಿತಿ ಸಿಕ್ಕಲ್ಲಿ ತಕ್ಷಣವೇ ಈ ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡಲು ತಿಳಿಸಿದರು.
ಕಾಲೇಜು ಹಾಗೂ ಪ್ರೌಢಶಾಲೆ ಆವರಣ ಹಾಗೂ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ ವಿದ್ಯಾರ್ಥಿಗಳ ಚಲನವಲನದ ಮೇಲೆ ನಿಗಾವಹಿಸಬೇಕು. ಸಾಮಾಜಿಕ ಜಾಲತಾಣಗಳು ಹಾಗೂ ಜಾಗೃತಿ ಪಲಕಗಳ ಮೂಲಕ ಡ್ರಗ್ಸ್ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ/ವಿದ್ಯಾರ್ಥಿನಿಯರ ಹಾಸ್ಟೆಲ್ ಸುತ್ತಮುತ್ತ ಸಿಸಿಟಿವಿ ಅಳವಡಿಸಬೇಕು. ಹಾಸ್ಟೆಲ್ ಗಳಿಗೆ ಪದೇ ಪದೇ ಬರುವ ಅನುಮಾನಾಸ್ಪದ ವ್ಯಕ್ತಿಗಳು, ಫುಡ್ ಡೆಲಿವರಿ ಬಾಯ್ಸ್ ಹಾಗೂ ಟೀ ಸರಬರಾಜು ಮಾಡುವವರ ವಾಹನ ಸಂಖ್ಯೆಗಳನ್ನು ಪರಿಶೀಲಿಸಬೇಕು. ಸಂಶಯ ಬಂದಲ್ಲಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಆರೋಗ್ಯ ಇಲಾಖೆ ಹಾಗೂ ಔಷಧಿ ನಿಯಂತ್ರಣಾಧಿಕಾರಿಗಳು ನಗರ ಮತ್ತು ಜಿಲ್ಲೆಯ ಮೆಡಿಕಲ್ ಸ್ಟೋರ್ ಹಾಗೂ ಫಾರ್ಮಸಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಬೇಕು. ನಿಷೇಧಿತ ಮಾದಕ ಮಾತ್ರೆ/ಮದ್ದುಗಳ ಮಾರಾಟ ಕಂಡುಬAದರೆ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ತಕ್ಷಣ ದಾಳಿ ನಡೆಸಬೇಕು ಎಂದು ಹೇಳಿದರು.
ಅರಣ್ಯ, ಕೃಷಿ ಹಾಗೂ ಅಬಕಾರಿ ಇಲಾಖೆ: ಮೈಸೂರು ಜಿಲ್ಲೆಯ ಕಾಡಂಚಿನ ಗ್ರಾಮಗಳು, ಹಾಡಿಗಳು ಹಾಗೂ ಜಮೀನುಗಳಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿರುವುದನ್ನು ಪತ್ತೆಹಚ್ಚಲು ಕ್ರಮವಹಿಸಬೇಕು ಎಂದರು.
ಜಿ.ಎಸ್.ಟಿ ಇಲಾಖೆಯ ಅಧಿಕಾರಿಗಳು ಸರಕು ಸಾಗಣೆ ವಾಹನಗಳನ್ನು ತಪಾಸಣೆ ಮಾಡುವಾಗ ಮಾದಕ ವಸ್ತುಗಳು ರವಾನೆಯಾಗುತ್ತಿವೆಯೇ ಎಂಬುದನ್ನು ಕಡ್ಡಾಯವಾಗಿ ಪರಿಶೀಲಿಸಿ, ಅನುಮಾನ ಬಂದಲ್ಲಿ ಪೊಲೀಸರಿಗೆ ವರದಿ ಮಾಡಬೇಕು ಎಂದು ಹೇಳಿದರು.
ಪುನಶ್ಚೇತನ ಕೇಂದ್ರಗಳು ಹಾಗೂ ಜೈಲುಗಳು: ಮಾದಕ ವ್ಯಸನಿಗಳಿಗೆ ಸಮಾಲೋಚನೆ ನಡೆಸುವಾಗ, ಡ್ರಗ್ಸ್ ಸರಬರಾಜಿನ ಮೂಲ ಹಾಗೂ ‘ಪೆಡ್ಲರ್ ಗಳ’ ವಿವರ ಪಡೆದು ಪೊಲೀಸರಿಗೆ ನೀಡಬೇಕು. ಕೇಂದ್ರ ಹಾಗೂ ಉಪ ಕಾರಾಗೃಹಗಳಲ್ಲಿರುವ ಬಂದಿಗಳು ಮಾದಕ ವ್ಯಸನಿಗಳಾಗದಂತೆ ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಾಗೇಶ್.ಎಲ್, ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿ ಡಾ.ನಾಗೇಶ್ ಆರಾಧ್ಯ ಸೇರಿದಂತೆ ವಿವಿದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.