Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿಗೆ ಬಾಗಿನ ಸಮರ್ಪಣೆ


ಮೈಸೂರು; ನಗರದ ಚಾಮುಂಡಿಬೆಟ್ಟದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿ ವರ್ಗಕ್ಕೆ ಸೀರೆ, ಬಳೆ, ಅರಿಶಿನ ಕುಂಕುಮ ಬಾಗಿನ ಸಮರ್ಪಣೆ
ಮೈಸೂರು; ಶ್ರೀದುರ್ಗಾ ಫೌಂಡೇಶನ್ ಹಾಗೂ ಪಿ ಆರ್ ಕೆ ಫೌಂಡೇಶನ್ ವತಿಯಿಂದ ಆಷಾಡ ಮಾಸದ ಮಾಸದ ಪ್ರಯುಕ್ತ ನಗರದ ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿ ವರ್ಗಕ್ಕೆ ಸೀರೆ ಬಳೆ ಅರಿಶಿನ ಕುಂಕುಮ ಬಾಗಿನ ಸಮರ್ಪಣೆ ಮಾಡಲಾಯಿತು,
ಈ ವೇಳೆ ಮಾತನಾಡಿದ ದೇವಸ್ಥಾನದ ಪ್ರಧಾನ ಅರ್ಚಕರಾದ ಶಶಿಶೇಖರ್ ದೀಕ್ಷಿತ್, ಆಷಾಢ ಮಾಸದಲ್ಲಿ ಯಾವುದೇ ಶುಭ ಕಾರ್ಯಗಳು ನಡೆಯುವುದಿಲ್ಲ. ಇಂತಹ ಸಂದರ್ಭದಲ್ಲಿ ಶಕ್ತಿ ದೇವತೆ ದರ್ಶನ ಪಡೆದರೆ ಒಳಿತಾಗುತ್ತದೆ. ಅದರಲ್ಲೂ ಜ್ಞಾನ ಶಕ್ತಿ, ಇಚ್ಛಾಶಕ್ತಿ, ಕ್ರಿಯಾಶಕ್ತಿ ಇರುವ ಚಾಮುಂಡಿತಾಯಿಗೆ ಆಷಾಢ ಮಾಸದಲ್ಲಿ ಪೂಜೆ ಸಲ್ಲಿಸಿದರೆ ಒಳ್ಳೆಯಾದಗುತ್ತದೆ ಎಂದು ತಿಳಿಸಿದರು.
ಪುರಾಣಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ಆಷಾಡ ಮಾಸದಲ್ಲಿ ಚಾಮುಂಡಿ ದೇವಿಗೆ ವಿಶೇಷ ಪ್ರಾರ್ಥನೆ ಪೂಜಾ ಕೈಂಕರ್ಯ ಸೇವೆ ಸಲ್ಲಿಸಲು ಮಹಿಳೆಯರು ಹೆಚ್ಚು ಪ್ರಾಮುಖ್ಯತೆ ನೀಡುತ್ತಾರೆ. ಪ್ರತಿನಿತ್ಯ ಸೇವೆ ಸಲ್ಲಿಸುವ ಮಹಿಳಾ ಭದ್ರತಾ ಸ್ವಚ್ಛತಾ ಸಿಬ್ಬಂದಿಗಳನ್ನ ಗೌರವಿಸಿ ಬಾಗಿನ ಸಮರ್ಪಣೆ ನೀಡುತ್ತಿರುವುದು ಅರ್ಥಪೂರ್ಣವಾದ ಆಚರಣೆ ಎಂದರು.
ಧಾರ್ಮಿಕ ಪರಂಪರೆ ಉಳಿಯಬೇಕಾದರೆ ಪರಿಸರ ಸಂರಕ್ಷಣೆಯೂ ಸಹ ಬಹಳ ಮುಖ್ಯವಾಗುತ್ತದೆ ಎಂದರು
ಮಹಿಳೆಯರಲ್ಲಿ ಧರ್ಮ ಜಾಗೃತಿ ಮತ್ತು ಧಾರ್ಮಿಕ ಸಾಮರಸ್ಯದ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಪ್ರತಿವರ್ಷದಂತೆ ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಆಯೋಜಿಸುತ್ತಾ ಬಂದಿರುವುದು ಅರ್ಥಪೂರ್ಣವಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ದೇವಸ್ಥಾನದ ಸಿಬ್ಬಂದಿ ಸೋಮಣ್ಣ, ಪಿಆರ್‌ಕೆ ಫೌಂಡೇಶನ್ ಅಧ್ಯಕ್ಷ ಅಯ್ಯಪ್ಪ, ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್, ಯುವ ಮುಖಂಡರಾದ ಜಿ ರಾಘವೇಂದ್ರ, ಮಂಜುಳಾ ಸೋಮಣ್ಣ, ರೂಪ ಗೌಡ, ಪಂಚಾಯತ್ ಡೆವಲಪ್ಮೆಂಟ್ ಅಧಿಕಾರಿ ಶೋಭಾ ದಿನೇಶ್, ಶೃತಿ ವಿನೋದ್,ಹೇಮಾ, ರಮ್ಯಾ, ವಿಜಯಲಕ್ಷಿ÷್ಮ ಅಯ್ಯಂಗಾರ್, ಸುವರ್ಣ, ರಾಧಾ, ಹಾಗೂ ಇನ್ನಿತರರು ಹಾಜರಿದ್ದರು.