Skip to main content

3Kaala News

ಸುಭಾಷಿತ 

ತನ್ನ ಕಣ್ಣೀರನ್ನು ತಾನೇ ಒರೆಸಿಕೊಳ್ಳುವ ವ್ಯಕ್ತಿ, ಇನ್ನೊಬ್ಬರ ಕಣ್ಣಲ್ಲಿ ಕಣ್ಣೀರು ಕಾಣಲು ಇಷ್ಟಪಡುವುದಿಲ್ಲ.
ಯಾಕೆಂದರೆ…
ನೋವಿನ ತೂಕ ಎಷ್ಟು ಭಾರವೆಂದು ಅವನು ಜೀವನದಿಂದಲೇ ಕಲಿತಿರುತ್ತಾನೆ. ಆದ್ದರಿಂದ ತಾನು ನೊಂದುಕೊಂಡರೂ, ಇತರರ ಸಂತೋಷಕ್ಕಾಗಿ ಪ್ರಾರ್ಥಿಸುತ್ತಿರುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಬಿ ಜೆ ಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಮಹೇಶ್ ತೆಲಗಿ ಹಗುರವಾಗಿ ಮಾತನಾಡಿರುವುದು ಖಂಡನೀಯ: ಸಂತೋಷ್ ಕುಮಾರ್ ಬಿ.ಎಂ.

ಮೈಸೂರು: ತನ್ನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸದೆ, ಅನಗತ್ಯವಾಗಿ ರಾಜಕೀಯ ಹೇಳಿಕೆಗಳನ್ನು ನೀಡುತ್ತಿರುವ ಸಚಿವರನ್ನು ಏನೆಂದು ಕರೆಯಬೇಕು ಎಂಬುದನ್ನು ವಿಜಯಪುರದ ಮಹೇಶ್ ತೆಲಗಿ ಅವರೇ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಬಿಜೆಪಿ ಮೈಸೂರು ಮಹಾನಗರದ ಮಾಧ್ಯಮ ಸಹ ಸಂಚಾಲಕರಾದ ಸಂತೋಷ್ ಕುಮಾರ್ ಬಿ.ಎಂ. ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ವಹಿಸಿರುವ ಖಾತೆಯ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವ ಬದಲು ದಿನೇ ದಿನೇ ರಾಷ್ಟಿçÃಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಹಾಗೂ ಬಿಜೆಪಿ ನಾಯಕರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಸಚಿವರ ಕಾರ್ಯವೈಖರಿಯನ್ನು ಟೀಕಿಸುವ ಸಂದರ್ಭದಲ್ಲಿ ಬಳಸಿದ ಪದವನ್ನು ಮುಂದಿಟ್ಟುಕೊAಡು, ಅದರ ಪೂರ್ಣ ಸಂದರ್ಭ ಹಾಗೂ ಅರ್ಥವನ್ನು ಅರಿಯದೆ ವಿಜಯೇಂದ್ರ ಅವರ ವಿರುದ್ಧ ಮಹೇಶ್ ತೆಲಗಿ ವಿಜಯಪುರ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಗುರವಾಗಿ ಮಾತನಾಡಿರುವುದು ಖಂಡನೀಯ ಎಂದು ಕಿಡಿಕಾರಿದ್ದಾರೆ.
ವಿಜಯೇಂದ್ರ ಅವರು ಯಾವ ಸಂದರ್ಭದಲ್ಲಿ, ಯಾರನ್ನು ಉದ್ದೇಶಿಸಿ ಯಾವ ಪದವನ್ನು ಬಳಸಿದ್ದಾರೆ ಎಂಬ ಕನಿಷ್ಠ ಅರಿವಿಲ್ಲದೆ ಟೀಕೆ ಮಾಡುವುದು ಸರಿಯಲ್ಲ. ರಾಜಕೀಯ ವಿಚಾರಗಳನ್ನು ರಾಜಕೀಯವಾಗಿಯೇ ಚರ್ಚಿಸಬೇಕು. ಆದರೆ ಈ ವಿಚಾರಕ್ಕೆ ದಲಿತ ಸಮುದಾಯವನ್ನು ಎಳೆದು ತಂದು, ಸಮಾಜದಲ್ಲಿ ಗೊಂದಲ ಅಥವಾ ಅಶಾಂತಿ ಉಂಟುಮಾಡುವ ರೀತಿಯಲ್ಲಿ ಹೇಳಿಕೆ ನೀಡುವುದನ್ನು ಬಿಜೆಪಿ ಕಾರ್ಯಕರ್ತರು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
ಹಲವಾರು ದಶಕಗಳಿಂದ ಕಲಬುರಗಿಯಲ್ಲಿ ರಾಜಕೀಯ ಪ್ರಭಾವ ಹೊಂದಿರುವ ಖರ್ಗೆ ಕುಟುಂಬವು ದಲಿತ ಸಮುದಾಯದ ಎಷ್ಟು ನಾಯಕರನ್ನು ಮುನ್ನೆಲೆಗೆ ತಂದಿದೆ/ ಕಲಬುರಗಿ ಸೇರಿದಂತೆ ತಮ್ಮ ತವರು ಜಿಲ್ಲೆಯಲ್ಲಿ ದಲಿತ ಸಮುದಾಯದ ಅಭಿವೃದ್ಧಿಗೆ ಎಷ್ಟು ಕೊಡುಗೆ ನೀಡಲಾಗಿದೆ? ಎಂಬ ಪ್ರಶ್ನೆಗಳಿಗೆ ಕಾಂಗ್ರೆಸ್ ನಾಯಕರು ಉತ್ತರಿಸಬೇಕು.
ದಲಿತ ಸಮುದಾಯದ ಮತಗಳನ್ನು ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಈ ಸಮುದಾಯದ ಹಿತಾಸಕ್ತಿಗಳನ್ನು ಕಡೆಗಣಿಸಿದೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಮೀಸಲಾದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗಿದೆ ಎಂಬ ವಿಚಾರದಲ್ಲಿಯೂ ಸರ್ಕಾರ ಸ್ಪಷ್ಟನೆ ನೀಡಬೇಕು. ಈ ಕುರಿತು ಮಾಜಿ ಸಚಿವ ಎಚ್.ಸಿ. ಮಹದೇವಪ್ಪ ಅವರು ಕೂಡ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವುದು ಗಮನಾರ್ಹ ಎಂದು ತಿಳಿಸಿದ್ದಾರೆ.
ದಲಿತ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಧ್ವನಿ ಎತ್ತಬೇಕಾದ ಮಹೇಶ್ ತೆಲಗಿ ವಿಜಯಪುರ ಅವರು, ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಮೆಚ್ಚಿಸಲು ವಿಷಯಕ್ಕೆ ಸಂಬAಧವಿಲ್ಲದ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ. ವೈಯಕ್ತಿಕ ಟೀಕೆ, ಧಮ್ಕಿ ಹಾಗೂ ಸಮುದಾಯದ ಹೆಸರನ್ನು ರಾಜಕೀಯವಾಗಿ ಬಳಸುವುದನ್ನು ಬಿಟ್ಟು, ವಸ್ತುನಿಷ್ಠ ವಿಚಾರಗಳಿದ್ದರೆ ಬಹಿರಂಗವಾಗಿ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದ್ದಾರೆ.
ಬಿ.ವೈ. ವಿಜಯೇಂದ್ರ ಅವರ ಬಗ್ಗೆ ಯಾವುದೇ ಆಧಾರವಿಲ್ಲದೆ ಹಗುರವಾಗಿ ಮಾತನಾಡುವುದನ್ನು ಮಹೇಶ್ ತೆಲಗಿ ವಿಜಯಪುರ ಅವರು ಕೂಡಲೇ ನಿಲ್ಲಿಸಬೇಕು. ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೆ ವಿಚಾರಾಧಾರಿತವಾಗಿ ಚರ್ಚಿಸಲಿ; ಆದರೆ ಸಮುದಾಯಗಳನ್ನು ಎಳೆದು ತಂದು ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನವನ್ನು ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.