Skip to main content

3Kaala News

ಸುಭಾಷಿತ 

ತನ್ನ ಕಣ್ಣೀರನ್ನು ತಾನೇ ಒರೆಸಿಕೊಳ್ಳುವ ವ್ಯಕ್ತಿ, ಇನ್ನೊಬ್ಬರ ಕಣ್ಣಲ್ಲಿ ಕಣ್ಣೀರು ಕಾಣಲು ಇಷ್ಟಪಡುವುದಿಲ್ಲ.
ಯಾಕೆಂದರೆ…
ನೋವಿನ ತೂಕ ಎಷ್ಟು ಭಾರವೆಂದು ಅವನು ಜೀವನದಿಂದಲೇ ಕಲಿತಿರುತ್ತಾನೆ. ಆದ್ದರಿಂದ ತಾನು ನೊಂದುಕೊಂಡರೂ, ಇತರರ ಸಂತೋಷಕ್ಕಾಗಿ ಪ್ರಾರ್ಥಿಸುತ್ತಿರುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಚಾಮುಂಡೇಶ್ವರಿಯ ಕೃಪೆಯಿಂದ ಮಳೆಯಾಗುತ್ತಿದ್ದು, ಸದ್ಯಕ್ಕೆ ಸಂಕಷ್ಟದ ಸ್ಥಿತಿಯಿಂದ ಪಾರಾಗಿದ್ದೇವೆ; ಎಸ್.ಜಯಪ್ರಕಾಶ್


ಮೈಸೂರು; ಶ್ರೀ ಮಹಾಗಣಪತಿ ಹಬ್ಬದಷ್ಟೇ ಶ್ರೀ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವವನ್ನು ಹಬ್ಬದಂತೆ ಮೈಸೂರಿನ ಭಾಗದಲ್ಲಿ ಎಲ್ಲಾ ಕಡೆ ಜನರು ತುಂಬಾ ಶ್ರದ್ಧಾಭಕ್ತಿಯಿಂದ ಆಚರಿಸುತ್ತಿದ್ದಾರೆಂದು ಬಿಜೆಪಿ ಮುಖಂಡ ಹಾಗೂ ಚಿತ್ರ ನಟ ಎಸ್.ಜಯಪ್ರಕಾಶ್ (ಜೆಪಿ) ಹೇಳಿದರು.
ಶ್ರೀ ಚಾಮುಂಡೇಶ್ವರಿ ವರ್ಧಂತಿ ಪ್ರಯುಕ್ತ ಮಂಗಳವಾರ ನಗರದ ಒಂಟಿಕೊಪ್ಪಲ್ ನಲ್ಲಿ ಏರ್ಪಡಿಸಿದ್ದ ವಿಶೇಷ ಪೂಜೆ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೆಟ್ಟದ ತಾಯಿ ಚಾಮುಂಡೇಶ್ವರಿಯ ಕೃಪೆಯಿಂದ ಮಳೆ ಉತ್ತಮವಾಗಿ ಆಗುತ್ತಿದೆ. ಕಬಿನಿ ಜಲಾಶಯ ತುಂಬಿ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದೆ. ಕೆ.ಆರ್.ಎಸ್ ಜಲಾಶಯಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಹರಿದು ಬರುತ್ತಿದೆ. ಇದೆ ರೀತಿ ಪರಿಸ್ಥಿತಿ ಮುಂದುವರಿದರೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ. ಸದ್ಯಕ್ಕೆ ಸಂಕಷ್ಟದ ಪರಿಸ್ಥಿತಿಯಿಂದ ಪಾರಾಗಿದ್ದೇವೆ. ರೈತರ ಬೆಳೆಗಳಿಗೂ ನೀರು ಹರಿಸಬೇಕು ಎಂದರು.
ಈ ವೇಳೆ ನಗರಪಾಲಿಕೆಯ ಮಾಜಿ ಸದಸ್ಯ ಮಾದೇಶ್, ಜೆಡಿಎಸ್ ನಗರ ಅಧ್ಯಕ್ಷ ಎಸ್.ಬಿ.ಎಂ ಮಂಜು, ಸಂಘದ ಪದಾಧಿಕಾರಿಗಳಾದ ಸತೀಶ್, ಪ್ರಕಾಶ್, ಮಂಜು, ಶ್ರೀನಿವಾಸ್ ಸೇರಿದಂತೆ ಅನೇಕ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.