Skip to main content

3Kaala News

ಸುಭಾಷಿತ 

ತನ್ನ ಕಣ್ಣೀರನ್ನು ತಾನೇ ಒರೆಸಿಕೊಳ್ಳುವ ವ್ಯಕ್ತಿ, ಇನ್ನೊಬ್ಬರ ಕಣ್ಣಲ್ಲಿ ಕಣ್ಣೀರು ಕಾಣಲು ಇಷ್ಟಪಡುವುದಿಲ್ಲ.
ಯಾಕೆಂದರೆ…
ನೋವಿನ ತೂಕ ಎಷ್ಟು ಭಾರವೆಂದು ಅವನು ಜೀವನದಿಂದಲೇ ಕಲಿತಿರುತ್ತಾನೆ. ಆದ್ದರಿಂದ ತಾನು ನೊಂದುಕೊಂಡರೂ, ಇತರರ ಸಂತೋಷಕ್ಕಾಗಿ ಪ್ರಾರ್ಥಿಸುತ್ತಿರುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜೀವವೈವಿಧ್ಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ


ಮೈಸೂರು: ಭೂಮಿಯ ಮೇಲಿರುವ ಸಸ್ಯ, ಪ್ರಾಣಿ ಹಾಗೂ ಸೂಕ್ಷಾ÷್ಮಣು ಜೀವಿಗಳ ವೈವಿಧ್ಯತೆಯನ್ನು ಮತ್ತು ಅವುಗಳ ಆವಾಸಸ್ಥಾನಗಳನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ ತಿಳಿಸಿದರು.
ಕರ್ನಾಟಕ ಜೀವವೈವಿಧ್ಯ ಮಂಡಳಿ ಹಾಗೂ ತಾಲ್ಲೂಕು ಪಂಚಾಯತ್ ಸಹಯೋಗದೊಂದಿಗೆ ತಾ.ಪಂ. ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ “ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ಬಲವರ್ಧನೆ ಮತ್ತು ಜೀವ ವೈವಿಧ್ಯತೆಯ ಸಂಘಟನೆ ಕುರಿತು ಜಾಗೃತಿ ಮೂಡಿಸುವ ಕಾರ್ಯಾಗಾರವನ್ನು” ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಪರಿಸರದಲ್ಲಿ ಸಮತೋಲನತೆ ಕಾಪಾಡಲು ಮತ್ತು ಶುದ್ಧವಾದ ಗಾಳಿ, ನೀರು ಸೇರಿದಂತೆ ಭವಿಷ್ಯದ ಪೀಳಿಗೆಗೆ ನೈಸರ್ಗಿಕ ಸಂಪನ್ಮೂಲಗಳನ್ನು ಉಳಿಸುವ ಸಲುವಾಗಿ ಜೀವವೈವಿಧ್ಯತೆಯ ಸಂರಕ್ಷಣೆ ಹಾಗೂ ಸುಸ್ಥಿರ ನಿರ್ವಹಣೆ ಅಗತ್ಯವಾಗಿದೆ ಎಂದರು ಹೇಳಿದರು.
ಗ್ರಾಮ ಪಂಚಾಯಿತಿಗಳ ಜೀವವೈವಿಧ್ಯ ನಿರ್ವಹಣಾ ಸಮಿತಿಯು ತಮ್ಮ ವ್ಯಾಪ್ತಿಯಲ್ಲಿರುವ ಜೀವ ಸಂಕುಲಗಳನ್ನು ಒಳಗೊಂಡ ಪರಿಸರ ಸೂಕ್ಷ÷್ಮ ಪ್ರದೇಶಗಳನ್ನು ಗುರುತಿಸಿ ಸಂರಕ್ಷಿಸುವ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.
ಕರ್ನಾಟಕ ಜೀವವೈವಿಧ್ಯ ಮಂಡಳಿಯ ತಾಂತ್ರಿಕ ಕಾರ್ಯನಿರ್ವಾಹಕರಾದ ಪ್ರಸನ್ನ ಮಾತನಾಡಿ, ಜೀವವೈವಿಧ್ಯ ನಿರ್ವಹಣಾ ಸಮಿತಿಯು ಜೈವಿಕ ಸಂಪನ್ಮೂಲಗಳ ಸಂರಕ್ಷಣೆಗಾಗಿ ಸ್ಥಳೀಯ ಮಟ್ಟದ ಕಾನೂನುಬದ್ಧ ಸಂಸ್ಥೆಯಾಗಿದೆ. ಜೈವಿಕ ಸಂಪನ್ಮೂಲಗಳ ಅಕ್ರಮ ಬಳಕೆ ತಡೆಗಟ್ಟುವಲ್ಲಿ ಹೆಚ್ಚಿನ ಅಧಿಕಾರ ಹೊಂದಿರುತ್ತದೆ ಎಂದು ತಿಳಿಸಿದರು.
ಮನುಷ್ಯರ ಆರೋಗ್ಯಕರ ಜೀವನಕ್ಕೆ ಹಾಗೂ ಜೀವವೈವಿಧ್ಯತೆಗೆ ನಿಕಟವಾದ ಸಂಬAಧವಿದೆ. ಈನಿಟ್ಟಿನಲ್ಲಿ ನಮ್ಮ ಸುತ್ತಲಿನ ಪರಿಸರವನ್ನು ಕಲುಷಿತಗೊಳಿಸಬಾರದು ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಯೋಜನಾಧಿಕಾರಿ ಸುರೇಶ್ ಅವರು ಸೇರಿದಂತೆ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಪಿಡಿಒ ಅವರು, ಆಢಳಿತಾಧಿಕಾರಿಗಳು, ಬಿಎಂಸಿ ಸದಸ್ಯರು ಹಾಜರಿದ್ದರು.