Skip to main content

3Kaala News

ಸುಭಾಷಿತ 

ತನ್ನ ಕಣ್ಣೀರನ್ನು ತಾನೇ ಒರೆಸಿಕೊಳ್ಳುವ ವ್ಯಕ್ತಿ, ಇನ್ನೊಬ್ಬರ ಕಣ್ಣಲ್ಲಿ ಕಣ್ಣೀರು ಕಾಣಲು ಇಷ್ಟಪಡುವುದಿಲ್ಲ.
ಯಾಕೆಂದರೆ…
ನೋವಿನ ತೂಕ ಎಷ್ಟು ಭಾರವೆಂದು ಅವನು ಜೀವನದಿಂದಲೇ ಕಲಿತಿರುತ್ತಾನೆ. ಆದ್ದರಿಂದ ತಾನು ನೊಂದುಕೊಂಡರೂ, ಇತರರ ಸಂತೋಷಕ್ಕಾಗಿ ಪ್ರಾರ್ಥಿಸುತ್ತಿರುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಿದ್ದರಾಮಯ್ಯ ಕೈವಾಡದಿಂದ ಶಾಸಕ ತನ್ವೀರ್ ಸೇ ಠ್‌ಗೆ ಸಚಿವ ಸ್ಥಾನ ತಪ್ಪಿದೆ; ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್


ಮೈಸೂರು: ಮೈಸೂರಿನ ಎನ್.ಆರ್. ಕ್ಷೇತ್ರದ ಹಿರಿಯ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಕೈ ತಪುö್ಪವದರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಕೈವಾಡವಿದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಆರೋಪಿಸಿದರು.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಶಾಸಕ ತನ್ವೀರ್ ಸೇಠ್ ಗೆ ಸಚಿವ ಸ್ಥಾನ ಕೈತಪ್ಪುವುದರಲ್ಲಿ ಮೈಸೂರು ಜಿಲ್ಲೆಯ ಮಾಜಿ ಸಿಎಂ ಕೈವಾಡವಿದೆ. ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಕ್ಕೆ ಅನುಗುಣವಾಗಿ ಸಂಪುಟವಿದೆ. ಆದರೆ ಹಿರಿಯ ರಾಜಕಾರಣಿ ತನ್ವೀರ್ ಸೇಠ್ ಗೆ ಸಚಿವ ಸ್ಥಾನ ಕೊಡಬೇಕಿತ್ತು. ಆದರೆ ಅವರಿ ಗೆ ಸಚಿವ ಸ್ಥಾನ ನೀಡಿದರೇ ತಮ್ಮ ಮಗನ ಪ್ರಭಾವ ಕುಗ್ಗುತ್ತೆ. ತಮ್ಮ ಪುತ್ರನ ಪ್ರಭಾವ ಕುಗ್ಗುತ್ತೆ ಎಂದು ಸಚಿವ ಸ್ಥಾನ ತಪ್ಪಿಸಿದ್ದಾರೆ. ತಮ್ಮ ಸ್ವಾರ್ಥಕ್ಕಾಗಿ ಕರ್ನಾಟಕ ರಾಜ್ಯವನ್ನು ಹಾಳು ಮಾಡಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.
ಸಚಿವರ ಪ್ರಮಾಣ ವಚನ ಸಮಾರಂಭಕ್ಕೆ ಸಿದ್ದರಾಮಯ್ಯ ಹೋಗಬೇಕಿತ್ತು. ಆದರೆ ದುರಂಹಕಾರದ ನಡೆಯಿಂಧ ಸಿದ್ದರಾಮಯ್ಯ ಹೋಗಲಿಲ್ಲ. ಸಿದ್ದರಾಮಯ್ಯ ನಡವಳಿಕೆ ಸರಿಯಿಲ್ಲವೆಂದು ಹೇಳಿದ್ದು ನಾನು ಒಬ್ಬನೇ ಎಂದು ಹರಿಹಾಯ್ದರು.