
ಮೈಸೂರು; ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರು ಗುರುವಾರ ಜಿಲ್ಲೆಯ ನಂಜನಗೂಡು ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ವೀಕ್ಷಣೆ ಮಾಡಿದರು.
ನಂಜನಗೂಡು ತಾಲೂಕಿನ ಹನುಮನಪುರ ಗ್ರಾಮಕ್ಕೆ ಭೇಟಿ ನೀಡಿ ಬರ ವೀಕ್ಷಣೆ ಮಾಡಿದರು. ಮೈಸೂರು ಜಿಲ್ಲೆಗೆ ಮಳೆ ಕೊರತೆ ಉಂಟಾಗಿದ್ದು, ರೈತರು ಬೆಳೆದ ಬೆಳೆಗಳು ಮಳೆ ಇಲ್ಲದೆ ಒಣಗುತ್ತಿವೆ. ಹೆಚ್ಚಿನ ಪ್ರಮಾಣದ ಬೆಳೆ ನಷ್ಟ ಉಂಟಾಗಿದೆ. ಇಂದು ನಂಜನಗೂಡು ನಂಜನಗೂಡು ತಾಲ್ಲೂಕು, ನಾಳೆ ಹುಣಸೂರು ತಾಲ್ಲೂಕಿಗೆ ಭೇಟಿ ನೀಡಿ ಬರ ವೀಕ್ಷಣೆ ಮಾಡಲಾಗುವುದು ಎಂದು ಹೇಳಿದರು.
ಕುಡಿಯುವ ನೀರಿನ ಬಳಕೆಗೆ ಕಾರ್ಯ ಗ್ರಾಮದಲ್ಲಿ 12 ಕೊಳವೆ ಬಾವಿಗಳನ್ನು ಕೊರೆಸಿದ್ದು, ಇದರಲ್ಲಿ 3 ರಲ್ಲಿ ಮಾತ್ರ ನೀರು ಬರುತ್ತಿವೆ. ಗ್ರಾಮಸ್ಥರ ಕೋರಿಕೆಯ ಮೇರೆಗೆ ಕೆರೆಯ ಬಳಿ ಮತ್ತೊಂದು ಕೊಳವೆ ಬಾವಿ ಕೊರೆಸುವಂತೆ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಇಂಜಿನಿಯರ್ ವರಿಗೆ ಸೂಚನೆ ನೀಡಿದರು. ಅದರಲ್ಲೂ ನೀರು ಬರದೆ ಇದ್ದರೆ ಟ್ಯಾಂಕರ್ ಮೂಲಕ ನೀರು ಪೂರೈಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯಾದ್ಯಂತ ಜಿಲ್ಲೆಗಳ ಬರ ಅಧ್ಯಯನಕ್ಕೆ ನೇಮಿಸಿರುವ ಉಸ್ತುವಾರಿ ಸಚಿವರುಗಳು ಆಯಾ ಜಿಲ್ಲೆಗಳಲ್ಲಿ ಬೇಟಿ ನೀಡುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿರುತ್ತಾರೆ. ಅದರಂತೆ ಬರ ವೀಕ್ಷಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಊರಿನ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸಚಿವರಿಗೆ ಮನವಿಗಳನ್ನು ಸಲ್ಲಿಸಿ, ಕಬಿನಿ ಜಲಾಶಯ ತುಂಬಿದ್ದು, ಸುತ್ತಮುತ್ತಲಿನ ಗ್ರಾಮಗಳ ಕೆರೆ ಕಟ್ಟೆಗಳನ್ನು ತುಂಬಿಸಲು ಕ್ರಮವಹಿಸಬೇಕು. ಇದರಿಂದ ಅಂತರ್ಜಲ ಮಟ್ಟ ಹೆಚ್ಚಾಗುತ್ತದೆ. ದನ,ಕರುಗಳಿಗೆ ಕುಡಿಯಲು ನೀರು ದೊರೆಯುತ್ತದೆ. ನಾಲೆಗಳಲ್ಲಿ ಹೂಳು ತುಂಬಿದ್ದು ಹೂಳು ತೆಗೆಸಬೇಕು. ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಪರಿಹರಿಸಬೇಕು ಎಂದು ಮನವಿ ಸಲ್ಲಿಸಿದರು.
ಈ ಸಂಧರ್ಭದಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್, ಜಿಲ್ಲಾಧಿಕಾರಿ ಜಿ ಲಕ್ಷಿ÷್ಮÃಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಎಸ್ ಬಾಲದಂಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತಿದ್ದರು.