
ಹುಣಸೂರು; ತಾಲೂಕಿನಲ್ಲಿ ತೀವ್ರ ಕುಡಿಯುವ ನೀರಿನ ಅಭಾವ ಎದುರಿಸುತ್ತಿರುವ ಗ್ರಾಮಗಳಿಗೆ ತಕ್ಷಣವೇ ಪರ್ಯಾಯ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸುವಂತೆ ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಾಲೂಕು ಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶುಕ್ರವಾರ ಹುಣಸೂರಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,
ಹುಣಸೂರು ತಾಲೂಕಿನಾದ್ಯಂತ ಇತ್ತೀಚೆಗೆ ಉಂಟಾಗಿರುವ ಹವಾಮಾನ ವೈಪರೀತ್ಯ ಹಾಗೂ ಮಳೆ ಅಭಾವದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಬೆಳೆ ಹಾನಿಯಾಗಿರುವ ಪ್ರದೇಶಗಳಿಗೆ ಖುದ್ದಾಗಿ ಭೇಟಿ ನೀಡಿ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಿ ಎಂದರು.
ಹುಣಸೂರು ತಾಲೂಕಿನ ಹಲವೆಡೆ ಬೇಸಿಗೆ ಮತ್ತು ಮುಂಗಾರು ಅವಧಿಯಲ್ಲಿ ಎದುರಾಗುತ್ತಿರುವ ಕುಡಿಯುವ ನೀರಿನ ಸಮಸ್ಯೆಯ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ಸಚಿವರು ಸಾರ್ವಜನಿಕರಿಗೆ ಕುಡಿಯುವ ನೀರಿನ ಅಭಾವ ಉಂಟಾಗದAತೆ ತಡೆಗಟ್ಟುವುದು ತಾಲೂಕು ಆಡಳಿತದ ಪ್ರಮುಖ ಆದ್ಯತೆಯಾಗಬೇಕು ಎಂದು ತಿಳಿಸಿದರು.
ಕುಡಿಯುವ ನೀರಿನ ತೀವ್ರ ಅಭಾವವಿರುವ ಪ್ರದೇಶಗಳನ್ನು ಗುರುತಿಸಿ, ತಕ್ಷಣವೇ ನೂತನವಾಗಿ ಬೋರ್ವೆಲ್ ಕೊರೆಸಲು ಆಡಳಿತಾತ್ಮಕ ಮತ್ತು ತಾಂತ್ರಿಕ ಕ್ರಮ ಕೈಗೊಳ್ಳಬೇಕು. ಹೊಸದಾಗಿ ಕೊಳವೆಬಾವಿ ಕೊರೆಸಲು ಕಾಲಾವಕಾಶ ಅಗತ್ಯವಿದ್ದಲ್ಲಿ ಅಥವಾ ಅಂತರ್ಜಲ ಮಟ್ಟ ಕುಸಿದಿರುವ ಕಡೆಗಳಲ್ಲಿ, ಸುತ್ತಮುತ್ತಲಿನ ಖಾಸಗಿ ವ್ಯಕ್ತಿಗಳ ಅಥವಾ ರೈತರ ಕೊಳವೆಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದುಕೊಂಡು ಗ್ರಾಮಸ್ಥರಿಗೆ ತಕ್ಷಣ ನೀರು ಸರಬರಾಜು ಮಾಡಬೇಕು. ಇಲ್ಲವಾದಲ್ಲಿ ಹೊಸ ಬೋರ್ವೆಲ್ ಮತ್ತು ಖಾಸಗಿ ಬೋರ್ವೆಲ್ ಗಳ ಲಭ್ಯತೆ ಸಾಧ್ಯವಾಗದ ಅತ್ಯಂತ ಸಮಸ್ಯಾತ್ಮಕ ಪ್ರದೇಶಗಳಿಗೆ ತಕ್ಷಣವೇ ಟ್ಯಾಂಕರ್ಗಳ ಮೂಲಕ ದಿನನಿತ್ಯ ಶುದ್ಧ ಕುಡಿಯುವ ನೀರನ್ನು ಪೂರೈಸಬೇಕು ಎಂದು ಸೂಚಿಸಿದರು.
ಕುಡಿಯುವ ನೀರಿನ ಸರಬರಾಜು ಮತ್ತು ಬೆಳೆ ಹಾನಿ ಪರಿಹಾರದಂತಹ ಸೂಕ್ಷ÷್ಮ ವಿಚಾರಗಳಲ್ಲಿ ಅಧಿಕಾರಿಗಳು ನಿರ್ಲಕ್ಷ÷್ಯ ವಹಿಸಿದರೆ ಸಹಿಸುವುದಿಲ್ಲ. ತಾಲೂಕಿನ ಯಾವುದೇ ಭಾಗದಲ್ಲೂ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ ಎಂಬ ದೂರುಗಳು ಬರದಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಮತ್ತು ಎಂಜಿನಿಯರಿAಗ್ ವಿಭಾಗದ ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದು ಕಾರ್ಯನಿರ್ವಹಿಸಬೇಕು. ಸಂಬAಧಪಟ್ಟ ಅಧಿಕಾರಿಗಳು ಪ್ರತಿದಿನ ನೀರಿನ ಅಭಾವವಿರುವ ಗ್ರಾಮಗಳ ಪಟ್ಟಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.
ಶಾಸಕ ಹರೀಶ್ಗೌಡ ಮಾತನಾಡಿ, ಹುಣಸೂರು ತಾಲೂಕಿನಲ್ಲಿ ಸುಮಾರು 5,000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು, ಆದರೆ ಮಳೆ ಕೊರತೆಯಿಂದ ಕೇವಲ 1,050 ಹೆಕ್ಟೇರ್ನಲ್ಲಿ ಮಾತ್ರ ಬಿತ್ತನೆಯಾಗಿದೆ. ವಿವಿಧ ಭಾಗಗಳಲ್ಲಿ ಮಳೆ ಅಭಾವ ಮತ್ತು ಬೆಳೆ ಹಾನಿಯ ಕುರಿತು ರೈತರೊಂದಿಗೆ ಚರ್ಚಿಸಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಏಪ್ರಿಲ್, ಮೇ ಮತ್ತು ಜೂನ್ ತಿಂಗಳಲ್ಲಿ ವಾಡಿಕೆಗಿಂತ ಶೇ. 45% ರಿಂದ 85% ರಷ್ಟು ಮಳೆ ಕೊರತೆಯಾಗಿದ್ದು, ಶೇಕಡಾ 50% ಕ್ಕೂ ಹೆಚ್ಚು ಕೃಷಿ ಇಳುವರಿ ಮೇಲೆ ನೇರ ಪರಿಣಾಮ ಬೀರಿದೆ ಎಂದು ಹೇಳಿದರು.
ಸುಮಾರು 90 ರಿಂದ 100 ದಿನಗಳ ಕಾಲ ದೀರ್ಘಾವಧಿ ಒಣಹವೆ ಇದ್ದುದ್ದರಿಂದ, ಅಲಸಂದೆ, ಅವರೇಕಾಯಿ ಮುಂತಾದ ಬೆಳೆಗಳ ಬೆಳವಣಿಗೆ ಕುಂಠಿತಗೊAಡು ಹೂವು ಮತ್ತು ಕಾಯಿ ಬಿಡುವ ಹಂತದಲ್ಲಿ ತೀವ್ರ ಹಾನಿಯಾಗಿದೆ ಎಂದರು.
ಕಳೆದ ಬಾರಿಯ ಹರಾಜಿನಲ್ಲಿ ತಂಬಾಕು ಬೆಲೆ ತೀವ್ರವಾಗಿ ಕುಸಿದಿದ್ದು ಕೆಜಿಗೆ ?130 ಹಾಗೂ ?90 ರವರೆಗೂ ಕಡಿಮೆಯಾಗಿತ್ತು, ಇದರಿಂದ ರೈತರು ಅನುಭವಿಸಿದ ನಷ್ಟವನ್ನು ಸರಿಪಡಿಸಲು ಸರ್ಕಾರದಿಂದ ಬೆಂಬಲ ಅಥವಾ ಪರಿಹಾರ ಅಗತ್ಯವೆಂದು ಹೇಳಿದರು. ರಾಜ್ಯ ತಂಬಾಕು ಮಂಡಳಿಯ ಅಧಿಕಾರಿಗಳು ಪರವಾನಗಿ ಹೊಂದಿರುವ ಬೆಳೆಗಾರರು ಮತ್ತು ಮಾರುಕಟ್ಟೆ ಅಂಕಿ-ಅAಶಗಳ ಸಮಗ್ರ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದರು.
ಸಭೆಯಲ್ಲಿ ಶಾಸಕ ಕೆ. ವೆಂಕಟೇಶ್, ಜಿಲ್ಲಾಧಿಕಾರಿ ಜಿ. ಲಕ್ಷಿö್ಮಕಾಂತರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಎಸ್ ಯುಕೇಶ್ ಕುಮಾರ್, ಕೃಷಿ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು
ನಂತರ ಸಚಿವರು ಪಿರಿಯಾಪಟ್ಟಣ ತಾಲ್ಲೂಕಿನ ರಾವಂದೂರು ಗ್ರಾಮದಲ್ಲಿ ತಂಬಾಕು ಬೆಳೆ ಪ್ರದೇಶಕ್ಕೆ ಭೇಟಿ ನೀಡಿ ಮಳೆ ಕೊರತೆಯಿಂದ ಬೆಳೆ ಹಾನಿಯಾಗಿರುವ ತಂಬಾಕು ಬೆಳೆಯನ್ನು ವೀಕ್ಷಣೆ ಮಾಡಿದರು. ನಂತರ ರಾವಂದೂರು ಗ್ರಾಮದ ಶಿವಶಕ್ತಿ ಮಹಲ್ ನಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ತಾಲ್ಲೂಕಿನ ಬರ ಪರಿಸ್ಥಿತಿ ಹಾಗೂ ಕುಡಿಯುವ ನೀರಿನ ಲಭ್ಯತೆಯ ಕುರಿತು ಮಾಹಿತಿ ಪಡೆದುಕೊಂಡರು. ರೈತರಿಂದ ಅಹವಾಲುಗಳನ್ನು ಸ್ವೀಕರಿಸಿದರು.