
ಹನೂರು ; ಅಪರಿಚಿತ ವಾಹನದ ಹಿಟ್ ಅಂಡ್ ರನ್ಗೆ ಇಬ್ಬರು ಸಾವಿಗೀಡಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ.
ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದ ಯುವರಾಜ್ (50) ಮತ್ತು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಎ ಕೋಡಹಳ್ಳಿ ಗ್ರಾಮದ ಶಶಾಂಕ್ (25) ಮೃತಪಟ್ಟವರು. ಮಲೆ ಮಹದೇಶ್ವರ ಬೆಟ್ಟ ಮುಖ್ಯ ರಸ್ತೆಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಪರಾರಿಯಾಗಿದ್ದು ಸ್ಥಳದಲ್ಲೇ ಇಬ್ಬರು ಸವಾರರು ಕೊನೆಯುಸಿರೆಳೆದಿದ್ದಾರೆ.
ಸುದ್ದಿ ತಿಳಿದ ತಕ್ಷಣ ರಾಮಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು, ಅಪಘಾತ ಎಸಗಿ ಪರಾರಿಯಾಗಿರುವ ವಾಹನ ಪತ್ತೆ ಹಚ್ಚಲು ಕ್ರಮ ಕೈಗೊಂಡಿದ್ದಾರೆ.