ಚಾಮುಂಡಿಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ
ಮೈಸೂರು: ನಗರದ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದ ಪಕ್ಕದ ವಸತಿ ಪ್ರದೇಶದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಅದು ಓಡಾಡುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಚಿರತೆ ಬೀದಿ ನಾಯಿಗಳನ್ನು ಬೇಟೆಯಾಡಲು ಸಮೀಪದ ಚಾಮುಂಡಿಬೆಟ್ಟ ಗ್ರಾಮದ ನಾಯಕರ ಬೀದಿಯ ಮಾರಮ್ಮ ದೇವಾಲಯದ ಬಳಿ ಓಡಾಡುತ್ತಿತ್ತು. ನಾಯಕರ ಬೀದಿಯ ಮನೆಯೊಂದರ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ ನೋಡಿದ ಸ್ಥಳೀಯರು ಅರಣ್ಯ ಇಲಾಖೆಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆ ಸೆರೆಗೆ ಬೋನ್ ಇರಿಸಿ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಚಾಮುAಡಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಚಿರತೆಗಳು ಇರಬಹುದು. ಚಾಮುಂಡಿ ದೇವಾಲಯಕ್ಕೆ ಹೊಂದಿಕೊAಡಿರುವAತಹ ಚಾಮುಂಡಿ ಗ್ರಾಮದ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಮಾಹಿತಿ ಬಂದಿದ್ದು, ಪರಿಶೀಲನೆ ನಡೆಸಿ ಚಿರತೆ ಸೆರೆಗೆ ಕ್ರಮ ಕೈಗೊಳ್ಳಲಾಗಿದೆ” ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಪರಮೇಶ್ವರ್ ಸುದ್ದಿಗಾರರಿಗೆ ತಿಳಿಸಿದರು.