Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರು ವಿವಿ ಕುಲಸಚಿವರಾಗಿ (ಮೌಲ್ಯಮಾಪನ) ಪ್ರೊ. ಕೆಂಪೇಗೌಡ ಬಿ.ಕೆ ನೇಮಕ
ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಕುಲಸಚಿವರನ್ನಾಗಿ (ಮೌಲ್ಯಮಾಪನ) ಪ್ರೊ. ಕೆಂಪೇಗೌಡ ಬಿ.ಕೆ. ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ಮೈಸೂರು ಜಿಲ್ಲೆಯ ನಂಜನಗೂಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರು ಹಾಗೂ ಪ್ರಾಂಶುಪಾಲರಾಗಿರುವ ಪ್ರೊ. ಕೆಂಪೇಗೌಡ ಅವರನ್ನು ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈ ನೇಮಕ ಮಾಡಲಾಗಿದೆ.
ನೇಮಕಾತಿ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.