
ಮೈಸೂರು; ನಗರದ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟಿçÃಯ ಸೇವಾ ಯೋಜನಾ ಘಟಕಗಳ ವತಿಯಿಂದ 80ನೇ ಸ್ವಾತಂತ್ರೊö್ಯÃತ್ಸವದ ಅಂಗವಾಗಿ “ಹರ್ ಘರ್ ತಿರಂಗಾ” ಅಭಿಯಾನದಡಿಯಲ್ಲಿ ಸ್ವಚ್ಛತಾ ಮತ್ತು ಗಿಡನೆಡುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.
ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕಿ ಡಾ. ಡಿ.ಎಸ್. ಪ್ರತಿಮಾ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ರಾ.ಸೇ.ಯೋ. ಸ್ವಯಂ ಸೇವಕ ಸೇವಕಿಯರು ಕಾಲೇಜಿನ ಸುತ್ತಮುತ್ತ ಹಾಗೂ ಜಯಲಕ್ಷಿö್ಮÃಪುರಂ ಪಾರ್ಕ್ ಇನ್ನಿತರ ಕಡೆಗಳಲ್ಲಿ ಸ್ವಚ್ಛತೆಯನ್ನು ಮಾಡಿ ಗಿಡಗಳನ್ನು ನೆಡುವುದರ ಮೂಲಕ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದರು.
ಇದೇ ಸಂದರ್ಭದಲ್ಲಿ ಮಹಾಜನ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಡಾ. ಟಿ. ವಿಜಯಲಕ್ಷಿö್ಮ ಮುರಳೀಧರ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಆರ್. ಜಯಕುಮಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಎಸ್. ಆರ್ ರಮೇಶ್, ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ ಎಚ್., ಅರ್ಥಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಪುಷ್ಪರಾಣಿ ಪಿ.ಜಿ., ಗ್ರಂಥಪಾಲಕಿ ವೀಣಾ ಎಂ, ರಾಷ್ಟಿçÃಯ ಸೇವಾ ಯೋಜನೆಯ ಕಾರ್ಯಾಕ್ರಮಾಧಿಕಾರಿಗಳಾದ ಡಾ. ದೊಡ್ಡರಸಯ್ಯ ಜಿ, ನಿರಂಜನ್ ಎಲ್, ಅಧ್ಯಾಪಕ ಹಾಗೂ ಅಧ್ಯಾಪಕೇತರರು, ಎನ್.ಎಸ್.ಎಸ್. ಸ್ವಯಂ ಸೇವಕ, ಸೇವಕಿಯರು ಭಾಗವಹಿಸಿದ್ದರು.