Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಗುಂಡೇಟಿಗೆ ಮೂವರ ಬಲಿ ಪ್ರಕರಣದ ಬಗ್ಗೆ ಹಲವು ಸಂಶಯಗಳು ಇದೆ. ಘಟನೆ ಬಗ್ಗೆ ಸಮಗ್ರ ತನಿಖೆ ಮಾಡಿಸುತ್ತೇವೆ ಸಚಿವ ಸಿ.ಪುಟ್ಟರಂಗಶೆಟ್ಟಿ


ಮೈಸೂರು: ವನ್ಯ ಜೀವಿಗಳನ್ನು ಬೇಟೆಯಾಡಿಕೊಂಡು ವಾಪಸ್ ಬರುವಾಗ ಗುಂಡು ಹೊಡೆದರು, ಹಾಗಾಗಿ ರಕ್ಷಣೆಗಾಗಿ ಪ್ರತಿ ಗುಂಡಿನ ದಾಳಿ ನಡೆಸಿದಾಗ ಮೂವರು ಸಾವಿಗೀಡಾಗಿದ್ದಾರೆ ಎಂದು ಅರಣ್ಯ ಇಲಾಖೆಯವರು ಹೇಳುತ್ತಿದ್ದಾರೆ. ಇದನ್ನ ನಂಬುವ ಸ್ಥಿತಿಯಲ್ಲಿ ನಾನು ಇಲ್ಲ. ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪುö್ಪ ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದರು.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶಾಗ್ಯ ಸಮೀಪದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡೇಟಿಗೆ ಬಲಿಯಾಗಿರುವ ಹನೂರು ತಾಲೂಕಿನ ತೋಮಿಯರ್ ಪಾಳ್ಯದ ನಿವಾಸಿಗಳಾದ ಕುಮಾರ್, ಆಂಥೋಣಿ ಸ್ವಾಮಿ ಹಾಗೂ ಪೀಟರ್ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆಂದು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತರಲಾಗಿದ್ದು, ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಪುಟ್ಟರಂಗಶೆಟ್ಟಿ ಮೃತರ ಕುಟುಂಬದವರಿಗೆ ಸಾಂತ್ವಾನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳು ನನಗೆ ಸುಳ್ಳು ಮಾಹಿತಿ ಕೊಟ್ಟಿದ್ದಾರೆ. ಒಬ್ಬೊಬ್ಬ ಅಧಿಕಾರಿ ಒಂದೊAದು ರೀತಿ ನಮಗೆ ಸುಳ್ಳು ಹೇಳುತ್ತಿದ್ದಾರೆ. ನನಗೆ ಇಡೀ ಪ್ರಕರಣದ ಬಗ್ಗೆ ಸತ್ಯಾಸತ್ಯತೆ ಗೊತ್ತಾಗುತ್ತಿಲ್ಲ ಎಂದರು. ಗುಂಡೇಟಿಗೆ ಬಲಿಯಾದ ಮೇಲೆ ಮೃತರ ದೇಹಗಳ್ನು ಯಾಕೆ ಅಲ್ಲಿಂದ ಮೈಸೂರಿಗೆ ಶಿಫ್ಟ್ ಮಾಡಿದರು. ಯಾರನ್ನು ಕೇಳದೆ ಮೈಸೂರಿಗೆ ಮೃತ ದೃಹ ಏಕೆ ಬಂತು. ನನಗೆ ಅರಣ್ಯ ಇಲಾಖೆಯವರು ಹೇಳುತ್ತಿರುವುದು ಸುಳ್ಳು ನನಗೆ ಈ ಪ್ರಕರಣದ ಬಗ್ಗೆ ಹಲವು ಸಂಶಯಗಳು ಇದೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆ ಮಾಡಿಸುತ್ತೇವೆ. ಮೃತಪಟ್ಟಿರುವವರು ಭೇಟೆಗಾರರು ಎಂದು ನನಗೆ ಅನಿಸುವುದಿಲ್ಲಾ. ಅರಣ್ಯ ಇಲಾಖೆಯ ಬೇಜವಾಬ್ದಾರಿತನ ಎದ್ದು ಕಾಣುತ್ತಿದೆ. ಪ್ರಕರಣದಿಂದ ಸರ್ಕಾರಕ್ಕೂ ಮುಜುಗರ ಆಗಿದೆ. ಪ್ರಕರಣದ ಬಗ್ಗೆ ಇನ್ನು ಯಾರು ದೂರು ಕೊಟ್ಟಿಲ್ಲ. ಎಫ್‌ಐಆರ್ ಆಗದೆ ಮರಣೋತ್ತರ ಪರೀಕ್ಷೆ ಆಗಲ್ಲ ಎಂದು ಹೇಳಿದರು.
ಚಾಮರಾಜನಗರ ಲೋಕಸಭೆಯ ಸಂಸದ ಸುನೀಲ್ ಬೋಸ್ ಮಾತನಾಡಿ, ನಾನು ಘಟನೆ ಬಗ್ಗೆ ಒಂದು ಸೈಡ್ ಸ್ಟೋರಿ ಕೇಳಿದ್ದೇನೆ. ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ಕೊಟ್ಟಿದ್ದಾರೆ. ಮೃತರು ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದರು. ಈ ನಡುವೆ ಅವರು ನಮ್ಮ ಮೇಲೆ ಫೈರ್ ಮಾಡಿದರು. ಬಳಿಕ ನಾವು ಫೈರ್ ಮಾಡಿದೇವು ಅಂತ ಅರಣ್ಯ ಇಲಾಖೆಯ ಸಿಬ್ಬಂದಿ ಹೇಳಿದ್ದಾರೆ. ಶೂಟ್ ಮಾಡುವ ಮುನ್ನ ಗಾಳಿಯಲ್ಲಿ ಗಂಡು ಹಾರಿಸಬಹುದು. ಅರಣ್ಯ ಇಲಾಖೆ ಸಿಬ್ಬಂದಿಗಳು ಇದನ್ನು ಮಾಡಿಲ್ಲ. ಅರಣ್ಯ ಇಲಾಖೆ ಲೋಪ ಇದೆ ಅನ್ನಿಸುತ್ತಿದೆ. ಮೃತದೇಹಗಳನ್ನು ಮೈಸೂರಿಗೆ ತಂದಿದ್ದು ಯಾಕೆ ಅನ್ನೋ ಪ್ರಶ್ನೆ ನಾನು ಕೇಳಿದ್ದೇನೆ. ಈ ಘಟನೆಯಲ್ಲಿ ಓರ್ವ ಬದುಕಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತನ ಬಳಿ ಮಾಹಿತಿ ಪಡೆದುಕೊಳ್ಳುತ್ತೇವೆ ಎಂದು ಹೇಳಿದರು.