Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಶ್ರದ್ಧೆ, ಪ್ರಾಮಾಣಿಕತೆ, ಪರಿಶ್ರಮದಿಂದ ಕಾರ್ಯನಿರ್ವಹಿಸುವ ಮೂಲಕ ದೇಶದ ಅಭಿವೃದ್ಧಿಗೆ ಬಲ ನೀಡೋಣ; ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಎಂ.ಎಸ್. ಅರ್ಚನಾ


ಮೈಸೂರು: ಗ್ರಾಹಕರಿಗೆ ಉತ್ತಮ ಗುಣಮಟ್ಟದ, ನಿರಂತರ ಹಾಗೂ ವಿಶ್ವಾಸಾರ್ಹ ವಿದ್ಯುತ್ ಪೂರೈಕೆ ಮಾಡುವ ನಿಟ್ಟಿನಲ್ಲಿ ಶ್ರದ್ಧೆ, ಪ್ರಾಮಾಣಿಕತೆ, ಪರಿಶ್ರಮದಿಂದ ಕಾರ್ಯನಿರ್ವಹಿಸುವ ಮೂಲಕ ದೇಶದ ಅಭಿವೃದ್ಧಿಗೆ ಬಲ ನೀಡೋಣ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕಿ ಎಂ.ಎಸ್. ಅರ್ಚನಾ ಹೇಳಿದರು.
ಶನಿವಾರ ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಚಾವಿಸನಿನಿ ನಿಗಮ ಕಚೇರಿಯಲ್ಲಿ ಆಯೋಜಿಸಿದ್ದ 80ನೇ ಸ್ವಾತಂತ್ರ÷್ಯ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟç ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, “ದೇಶಕ್ಕೆ ಸ್ವಾತಂತ್ರ÷್ಯ ದೊರಕಿಸಿಕೊಡಲು ತಮ್ಮ ಜೀವ ಹಾಗೂ ಜೀವನವನ್ನೇ ತ್ಯಾಗ ಮಾಡಿದ ಮಹನೀಯರನ್ನು ನಾವೆಲ್ಲರೂ ಸ್ಮರಿಸಬೇಕಿದೆ. ಎಲ್ಲಾ ಮಹನೀಯರು ಕಂಡಿದ್ದ ಬಲಿಷ್ಠ ಹಾಗೂ ಸದೃಢ ಭಾರತದ ಕನಸನ್ನು ನನಸಾಗಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿದೆ” ಎಂದರು.
“ಸದೃಢ ಭಾರತದ ನಿರ್ಮಾಣದಲ್ಲಿ ವಿದ್ಯುತ್ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ದೇಶದ ಆರ್ಥಿಕ ಅಭಿವೃದ್ಧಿ, ಕೈಗಾರಿಕೆ, ಕೃಷಿ ಹಾಗೂ ಜನರ ದೈನಂದಿನ ಬದುಕಿನಲ್ಲಿ ವಿದ್ಯುತ್ ಕ್ಷೇತ್ರ ಅತ್ಯಂತ ಪ್ರಮುಖ ಪಾತ್ರವಹಿಸುತ್ತಿದ್ದು, ದೇಶದ ಆರ್ಥಿಕ ಪ್ರಗತಿ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ನಿರಂತರ ವಿದ್ಯುತ್ ಪೂರೈಕೆ ಅಗತ್ಯವಾಗಿದೆ.
ಅದ್ದರಿಂದ ಸೆಸ್ಕ್ ಸಿಬ್ಬಂದಿ ತಮ್ಮ ಕರ್ತವ್ಯವನ್ನು ನಿಷ್ಠೆ ಮತ್ತು ಜವಾಬ್ದಾರಿಯಿಂದ ನಿರ್ವಹಿಸುವ ಮೂಲಕ ಸಂಸ್ಥೆಯ ಅಭಿವೃದ್ಧಿ ಹಾಗೂ ದೇಶದ ಪ್ರಗತಿಗೆ ಕೊಡುಗೆ ನೀಡಬೇಕಿದೆ ಎಂದು ತಿಳಿಸಿದರು.
ಸಿಬ್ಬಂದಿಗೆ ಪ್ರಶಂಸಾ ಪತ್ರ ವಿತರಣೆ:
ಇದೇ ಸಂದರ್ಭದಲ್ಲಿ ಕರ್ತವ್ಯ ಹಾಗೂ ಜವಾಬ್ದಾರಿಯನ್ನು ಅತ್ಯುತ್ತಮವಾಗಿ ನಿರ್ವಹಿಸಿದ ಸಿಬ್ಬಂದಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು. ವ್ಯವಸ್ಥಾಪಕ ನಿರ್ದೇಶಕರು ಹಾಗೂ ಇತರೆ ಗಣ್ಯರು, ಪ್ರಶಂಸಾ ಪತ್ರವನ್ನು ವಿತರಿಸಿ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯನಿಷ್ಠೆಯನ್ನು ಶ್ಲಾಘಿಸಿದರು. ಅಂತೆಯೇ ವಿದ್ಯುತ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದವರನ್ನು ಕಳೆದುಕೊಂಡು, ಅನುಕಂಪದ ಆಧಾರದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡವರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಯಿತು.
ಮೃತರ ಕುಟುಂಬಕ್ಕೆ ವಿಮೆ ಪರಿಹಾರ:
ಇದೇ ವೇಳೆ ಕರ್ತವ್ಯ ನಿರ್ವಹಣೆ ಸಂದರ್ಭದಲ್ಲಿ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಲೈನ್‌ಮನ್ ಮಂಜುನಾಥ್ ಹಾಗೂ ರಸ್ತೆ ಅಪಘಾತದಲ್ಲಿ ಅಸುನೀಗಿದ ಕಿರಿಯ ಇಂಜಿನಿಯರ್ ಕಿರಣ್ ಕುಮಾರ್ ಅವರ ಕುಟುಂಬದವರಿಗೆ ತಲಾ 1.06 ಕೋಟಿ ರೂ.ಗಳ ವಿಮೆ ಪರಿಹಾರದ ಚೆಕ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಸೆಸ್ಕ್ ತಾಂತ್ರಿಕ ನಿರ್ದೇಶಕ ಎಲ್. ಲೋಕೇಶ್, ಮುಖ್ಯ ಪ್ರಧಾನ ವ್ಯವಸ್ಥಾಪಕಿ (ತಾಂತ್ರಿಕ) ಶರಣಮ್ಮ ಎಸ್. ಜಂಗಿನ, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಮುಖ್ಯ ಪ್ರಧಾನ ವ್ಯವಸ್ಥಾಪಕಿ ಲಿಂಗರಾಜಮ್ಮ, ಪ್ರಧಾನ ವ್ಯವಸ್ಥಾಪಕಿ ಡಾ. ಬಿ.ಆರ್. ರೂಪ, ಸೆಸ್ಕ್ ಜಾಗೃತ ದಳದ ಡಿವೈಎಸ್ಪಿ ಪೃಥ್ವಿ, 659 ಎಂಪ್ಲಾಯಿಸ್ ಯೂನಿಯನ್ ಉಪಾಧ್ಯಕ್ಷ ಸಂದೀಪ್, ಕೆನರಾ ಬ್ಯಾಂಕಿನ ಮಂಡ್ಯ ವಿಭಾಗದ ಎಜಿಎಂ ಜಿ. ಹರಿಕೃಷ್ಣ, ಮೈಸೂರು ವಿಭಾಗದ ಎಜಿಎಂ ಗೌತಮ್ ಸೇರಿದಂತೆ ವಿವಿಧ ಅಧಿಕಾರಿಗಳು, ಸಿಬ್ಬಂದಿ ಇದ್ದರು.