Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಮತ್ತು ಪ್ರಯೋಜನ ಪಡೆದುಕೊಳ್ಳಿ :ಕೆ.ಹರೀಶ್ ಗೌಡ


ಮೈಸೂರು: ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಮತ್ತು ಪ್ರಯೋಜನಗಳನ್ನು ವಿದ್ಯಾರ್ಥಿನಿಯರು ಸರಿಯಾಗಿ ತಿಳಿದುಕೊಂಡು, ತಮ್ಮ ಜೀವನದಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಕೆ.ಹರೀಶ್‌ಗೌಡ ಹೇಳಿದರು.
ಸೋಮವಾರ ನಗರದ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಯುವನಿಧಿ ಹಾಗೂ ಶಕ್ತಿ ಯೋಜನೆಗಳ ಕುರಿತು ವಿದ್ಯಾರ್ಥಿನಿಯರಿಗೆ ಅರಿವು ಮೂಡಿಸುವ ವಿಶೇಷ ಸಂವಾದ ಮತ್ತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,
ಗ್ರಾಮೀಣ ಪ್ರದೇಶಗಳಿಂದ ಬರುವ ವಿದ್ಯಾರ್ಥಿನಿಯರು ಕಾಲೇಜಿಗೆ ತಲುಪಲು ಎದುರಿಸುತ್ತಿರುವ ಸಾರಿಗೆ ಸಮಸ್ಯೆಯನ್ನು ಗಮನಿಸಿದ ಶಾಸಕರು, ಕಾಲೇಜಿನ ವೇಳಾಪಟ್ಟಿಗೆ ಅನುಗುಣವಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕಾಲೇಜಿನ ಬಿಸಿಎ ಕೋರ್ಸ್ಗೆ ತರಗತಿಗಳು ಮತ್ತು ಉಪನ್ಯಾಸಕರ ಕೊರತೆ ಕುರಿತು ಪೋಷಕರಿಂದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ, ಈ ವಿಷಯವನ್ನು ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಶಿಕ್ಷಣ ಸಚಿವರ ಗಮನಕ್ಕೆ ತಂದು ಶೀಘ್ರವೇ ಉಪನ್ಯಾಸಕರ ನೇಮಕ ಮಾಡಲು ತಿಳಿಸಲಾಗುವುದು ಎಂದರು.
ಮಾಜಿ ಶಾಸಕ ಎಂ.ಕೆ ಸೋಮಶೇಖರ್ ಮಾತನಾಡಿ, ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ಪ್ರತಿಯೊಬ್ಬರಿಗೂ ತಲುಪಲಿ ಎಂಬ ಉದ್ದೇಶದಿಂದ ಕ್ಷೇತ್ರ, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಸಮಿತಿಗಳನ್ನು ರಚಿಸಿದೆ ಎಂದರು.
ಡಿಪ್ಲೋಮ ಹಾಗೂ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಉದ್ಯೋಗ ಸಿಗದಿದ್ದಲಿ `ಯುವನಿಧಿ’ ಯೋಜನೆಯಡಿ ನೊಂದಣಿ ಮಾಡಿಕೊಂಡು ಯೋಜನಾ ಅಡಿಯಲ್ಲಿ ನೀಡಲಾಗುವ ಸಹಾಯಧನವನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ಬಳಸಿಕೊಳ್ಳಬಹುದು ಎಂದರು.
ಇAದಿನ ಸ್ಪರ್ಧಾತ್ಮಕ ಯುಗದಲ್ಲಿ ಮೊಬೈಲ್ ಹಾಗೂ ವ್ಯರ್ಥ ಹರಟೆಯಲ್ಲಿ ಕಾಲ ಕಳೆಯದೆ, ಶಿಕ್ಷಣದತ್ತ ಹೆಚ್ಚಿನ ಗಮನ ಹರಿಸಬೇಕು. ಈ ಅಮೂಲ್ಯವಾದ ಸಮಯವನ್ನು ಕಳೆದುಕೊಂಡರೆ ಭವಿಷ್ಯದಲ್ಲಿ ಹಿನ್ನಡೆಯಾಗುತ್ತದೆ.
ದೇಶದಲ್ಲಿ ಸಾಧನೆ ಮಾಡಿದ ಹೆಚ್ಚಿನವರು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿAದ ಬಂದವರಾಗಿದ್ದಾರೆ. ಕಷ್ಟಗಳನ್ನು ಅನುಭವಿಸಿದವರು ಜೀವನದಲ್ಲಿ ಉನ್ನತ ಮಟ್ಟಕ್ಕೆ ಬೆಳೆಯುತ್ತಾರೆ ಎಂದು ಹೇಳಿದರು.
ಬರೀ ಪದವಿ ಶಿಕ್ಷಣ ಮಾತ್ರವಲ್ಲದೆ, ಇಂಗ್ಲಿಷ್ ಸಂವಹನ ಕೌಶಲ್ಯ ಹಾಗೂ ಕಂಪ್ಯೂಟರ್ ಕೋರ್ಸ್ಗಳನ್ನು ಕಲಿಯುವುದರಿಂದ ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶಗಳನ್ನು ಪಡೆಯಬಹುದು. ಸರ್ಕಾರವು ಮಹಿಳೆಯರ ಉಚಿತ ಬಸ್ ಪ್ರಯಾಣ (ಶಕ್ತಿ ಯೋಜನೆ) ಹಾಗೂ ಗೃಹಲಕ್ಷಿ÷್ಮ ಯೋಜನೆಗಳ ಮೂಲಕ ಸಶಕ್ತಿಕರಣಕ್ಕೆ ಒತ್ತು ನೀಡಿದೆ. ವಿದ್ಯಾರ್ಥಿನಿಯರು ತಮ್ಮ ಕಠಿಣ ಶ್ರಮದ ಮೂಲಕ ಉತ್ತಮ ಫಲಿತಾಂಶ ಪಡೆದು ಪೋಷಕರಿಗೆ ಹಾಗೂ ಕಾಲೇಜಿಗೆ ಕೀರ್ತಿ ತರಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮೈಸೂರು ವಿಭಾಗದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷೆ ಪುಷ್ಪವಲ್ಲಿ, ಉಪಾಧ್ಯಕ್ಷ ಆರ್ ಗಿರೀಶ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮುರಳೀಧರ್, ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಪ್ರಾಂಶುಪಾಲರಾದ ಡಾ.ರೇಣುಕಾ ಬಾಯಿ.ವಿ, ಎಂ.ಡಿ ಸಿ.ಸಿ.ಬ್ಯಾಂಕ್ ಅಧ್ಯಕ್ಷರಾದ ಆರ್ ಮೂರ್ತಿ, ವಿವಿಧ ಕ್ಷೇತ್ರದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರುಗಳಾದ ಎಂ.ಎA. ಮಹಾದೇವ, ಸುಶೀಲ ಮರಿಗೌಡ, ವಿನಯ್ ಕುಮಾರ್ ಜೆ, ಮತ್ತು ಕಾಲೇಜಿನ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.