Skip to main content

3Kaala News

ಸುಭಾಷಿತ 

ನಾವು ಮಾಡುವ ಕೆಲಸದಲ್ಲಿ ಸಂಪೂರ್ಣ ಶ್ರದ್ಧೆ ಮತ್ತು ಭಕ್ತಿ ಇದ್ದಾಗ ಮಾತ್ರ ಯಶಸ್ಸು ಒಲಿಯುತ್ತದೆ. ಅರ್ಧಮನಸ್ಸಿನಿಂದ ಮಾಡುವ ಕೆಲಸ ಎಂದಿಗೂ ಪರಿಪೂರ್ಣ ಫಲ ನೀಡಲಾರದು.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರಿನಲ್ಲಿ ಮೊದಲ ಬಾರಿಗೆ ನಾಗರಿಕ ವಿಮಾನಯಾನ ಇಲಾಖೆಯ ಸಮಾಲೋಚನಾ ಸಮಿತಿ ಸಭೆ

  • ಉತ್ತಮ ವಿಮಾನ ಸಂಪರ್ಕ ಮತ್ತು ವಿಮಾನ ನಿಲ್ದಾಣ ವಿಸ್ತರಣೆಗೆ ಸಂಸದ ಯದುವೀರ್ ಒತ್ತಾಯ
    ಮೈಸೂರು:
    ಅರಮನೆ ನಗರಿ ಮೈಸೂರಿನಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಸಮಾಲೋಚನಾ ಸಮಿತಿ ಸಭೆ ನಡೆಯಿತು. ಮೈಸೂರಿನ ಹೆಚ್ಚುತ್ತಿರುವ ವಿಮಾನಯಾನ ಅಗತ್ಯತೆಗಳು ಹಾಗೂ ಭವಿಷ್ಯದ ಅಭಿವೃದ್ಧಿಯ ದೃಷ್ಟಿಯಿಂದ ಈ ಸಭೆ ಮಹತ್ವ ಪಡೆದುಕೊಂಡಿತು.
    ಸಭೆಯ ಅಧ್ಯಕ್ಷತೆ ವಹಿಸಿದ್ದ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು ಮಾತನಾಡಿ, ಮೈಸೂರಿಗೆ ಉತ್ತಮ ವಿಮಾನ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸಕಾರಾತ್ಮಕ ಭರವಸೆ ನೀಡಿದರು.
    ಮೈಸೂರಿಗೆ ಇನ್ನಷ್ಟು ಉತ್ತಮ ವಿಮಾನ ಸಂಪರ್ಕದ ಅಗತ್ಯವಿದೆ. ಮೈಸೂರಿಗೆ ಶೀಘ್ರದಲ್ಲೇ ಅದರ ಯೋಗ್ಯ ಪಾಲು ದೊರೆಯಲಿದೆ ಎಂಬ ವಿಶ್ವಾಸ ನನಗಿದೆ. ಸಂಸದ ಯದುವೀರ್ ಅವರು ಎಲ್ಲಾ ರೀತಿಯ ಸಹಕಾರಕ್ಕಾಗಿ ನನ್ನೊಂದಿಗೆ ನಿರಂತರವಾಗಿ ಅನುಸರಣೆ ಮಾಡುತ್ತಿದ್ದಾರೆ. ಬಾಕಿ ಉಳಿದಿರುವ ಎಲ್ಲಾ ಕಾಮಗಾರಿಗಳನ್ನು ತಕ್ಷಣ ಕೈಗೆತ್ತಿಕೊಳ್ಳುವಂತೆ ನನ್ನ ಕಚೇರಿಗೆ ನಿರ್ದೇಶನ ನೀಡುತ್ತೇನೆ ಎಂದು ಹೇಳಿದರು.
    ಸಭೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೈಸೂರಿನ ವಿಮಾನ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವಂತೆ ಒತ್ತಾಯಿಸಿ, ನಾಗರಿಕ ವಿಮಾನಯಾನ ಸಚಿವರಿಗೆ ವಿವರವಾದ ಮನವಿಯನ್ನು ಸಲ್ಲಿಸಿ, ಮೈಸೂರಿನಿಂದ ಮುಂಬೈ, ಕೊಚ್ಚಿ, ತಿರುಪತಿ ಹಾಗೂ ಗೋವಾ ಸೇರಿದಂತೆ ಪ್ರಮುಖ ದೇಶೀಯ ನಗರಗಳಿಗೆ ನೇರ ವಿಮಾನ ಸಂಪರ್ಕ ಕಲ್ಪಿಸುವಂತೆ ಅವರು ಮನವಿ ಮಾಡಿದರು.
    ಮೈಸೂರು ಕರ್ನಾಟಕದ ಪ್ರಮುಖ ಪ್ರವಾಸೋದ್ಯಮ ಮತ್ತು ಸಾಂಸ್ಕöÈತಿಕ ತಾಣವಾಗಿದ್ದು, ಉತ್ತಮ ವಿಮಾನ ಸಂಪರ್ಕವು ಪ್ರವಾಸೋದ್ಯಮ, ವ್ಯಾಪಾರ, ಶಿಕ್ಷಣ, ಆರೋಗ್ಯ ಸೇವೆ ಹಾಗೂ ಹೂಡಿಕೆ ಕ್ಷೇತ್ರಗಳ ಅಭಿವೃದ್ಧಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಲಿದೆ ಎಂದು ತಿಳಿಸಿದರು.
    ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆಗೆ ವೇಗ ನೀಡಲು ಒತ್ತಾಯ;
    ಮೈಸೂರು ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವ ವಿಸ್ತರಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವಂತೆ ಕೇಂದ್ರ ಸಚಿವರನ್ನು ಒತ್ತಾಯಿಸಿದರು.
    ವಿಮಾನ ನಿಲ್ದಾಣದ ವಿಸ್ತರಣಾ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವುದು ಅತ್ಯಂತ ಅಗತ್ಯವಾಗಿದ್ದು, ಇದರಿಂದ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿರ್ವಹಿಸುವುದರ ಜೊತೆಗೆ ಹೆಚ್ಚಿನ ವಿಮಾನ ಮಾರ್ಗಗಳು ಹಾಗೂ ದೊಡ್ಡ ವಿಮಾನಗಳ ಕಾರ್ಯಾಚರಣೆಗೆ ಅವಕಾಶ ದೊರೆಯಲಿದೆ ಎಂದು ಹೇಳಿದರು.
    ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗೆ ಸಂಬAಧಿಸಿದAತೆ ತಾವು ನಿರಂತರವಾಗಿ ಅನುಸರಣೆ ನಡೆಸುತ್ತಿದ್ದು, ಮೈಸೂರಿನ ಭವಿಷ್ಯದ ಅಗತ್ಯಗಳಿಗೆ ತಕ್ಕಂತಹ ಮೂಲಸೌಕರ್ಯ ಹಾಗೂ ವಿಮಾನ ಸಂಪರ್ಕ ಕಲ್ಪಿಸುವುದು ತಮ್ಮ ಪ್ರಮುಖ ಬದ್ಧತೆಯಾಗಿದೆ ಎಂದು ಯದುವೀರ್ ಹೇಳಿದರು.
    ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ನಾನು ನಿರಂತರವಾಗಿ ಅನುಸರಣೆ ಮಾಡುತ್ತಿದ್ದೇನೆ. ನನ್ನ ಬದ್ಧತೆ ಕೇವಲ ತಾತ್ಕಾಲಿಕ ಅಗತ್ಯಗಳನ್ನು ಪೂರೈಸುವುದಕ್ಕೆ ಸೀಮಿತವಾಗಿಲ್ಲ. ಮೈಸೂರಿಗೆ ದೇಶದ ವಿವಿಧ ಭಾಗಗಳೊಂದಿಗೆ ಬಲವಾದ ವಿಮಾನ ಸಂಪರ್ಕ ಕಲ್ಪಿಸುವಂತಹ ದೀರ್ಘಕಾಲೀನ ಮತ್ತು ಶಾಶ್ವತ ಪರಿಹಾರಕ್ಕಾಗಿ ನಾನು ಕಾರ್ಯನಿರ್ವಹಿಸುತ್ತಿದ್ದೇನೆ.”
    ಮೈಸೂರಿಗೆ ತಾತ್ಕಾಲಿಕ ಅಥವಾ ಅಲ್ಪಾವಧಿಯ ವಿಮಾನ ಸಂಪರ್ಕ ಪರಿಹಾರಗಳ ಬದಲಾಗಿ ದೀರ್ಘಕಾಲೀನ ವಿಮಾನಯಾನ ಕಾರ್ಯತಂತ್ರ ಅಗತ್ಯವಿದೆ ಎಂದು ಅವರು ಒತ್ತಿ ಹೇಳಿದರು. ದೇಶದ ಪ್ರಮುಖ ನಗರಗಳೊಂದಿಗೆ ಮೈಸೂರನ್ನು ಸಂಪರ್ಕಿಸುವ ಸಾಮರ್ಥ್ಯ ಹೊಂದಿರುವ ಬಲಿಷ್ಠ ಪ್ರಾದೇಶಿಕ ವಿಮಾನಯಾನ ಕೇಂದ್ರವಾಗಿ ಮೈಸೂರು ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವುದು ಅಗತ್ಯವಾಗಿದೆ ಎಂದು ತಿಳಿಸಿದರು.
    ಮೈಸೂರಿನ ಪ್ರವಾಸೋದ್ಯಮ ಆರ್ಥಿಕತೆಗೆ ವಿಮಾನ ಸಂಪರ್ಕ ಮತ್ತಷ್ಟು ಬಲ;
    ಮೈಸೂರು ತನ್ನ ಶ್ರೀಮಂತ ಪರಂಪರೆ, ಅರಮನೆಗಳು, ದಸರಾ, ಸಂಸ್ಕöÈತಿ, ಯೋಗ, ವೆಲ್‌ನೆಸ್ ಪ್ರವಾಸೋದ್ಯಮ ಹಾಗೂ ಸುತ್ತಮುತ್ತಲಿನ ಪ್ರಮುಖ ಪ್ರವಾಸಿ ತಾಣಗಳ ಕಾರಣದಿಂದ ವರ್ಷಪೂರ್ತಿ ದೇಶ-ವಿದೇಶಗಳಿಂದ ಪ್ರವಾಸಿಗರನ್ನು ಆಕರ್ಷಿಸುತ್ತದೆ.
    ಮುಂಬೈ, ಕೊಚ್ಚಿ, ತಿರುಪತಿ ಹಾಗೂ ಗೋವಾದಂತಹ ಪ್ರಮುಖ ನಗರಗಳಿಗೆ ನೇರ ವಿಮಾನ ಸಂಪರ್ಕ ಕಲ್ಪಿಸುವುದರಿಂದ ಪ್ರವಾಸಿಗರು ಹಾಗೂ ಮೈಸೂರಿನ ಜನರಿಗೆ ಹೆಚ್ಚಿನ ಅನುಕೂಲವಾಗುವುದರ ಜೊತೆಗೆ, ಸ್ಥಳೀಯ ಹೋಟೆಲ್, ಪ್ರವಾಸೋದ್ಯಮ, ವ್ಯಾಪಾರ ಮತ್ತು ಸೇವಾ ಕ್ಷೇತ್ರಗಳಿಗೆ ಹೊಸ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ಯದುವೀರ್ ಹೇಳಿದರು.
    ಅದೇ ರೀತಿ, ಪ್ರಮುಖ ವಿಮಾನಯಾನ ಹಬ್‌ಗಳೊಂದಿಗೆ ಉತ್ತಮ ಸಂಪರ್ಕ ಕಲ್ಪಿಸುವುದರಿಂದ ಮೈಸೂರಿನ ಪ್ರಯಾಣಿಕರಿಗೆ ದೇಶದ ವಿವಿಧ ಭಾಗಗಳಿಗೆ ಹಾಗೂ ಅಂತರರಾಷ್ಟಿçÃಯ ಸ್ಥಳಗಳಿಗೆ ಸುಲಭವಾಗಿ ಪ್ರಯಾಣಿಸಲು ಅನುಕೂಲವಾಗಲಿದೆ ಎಂದು ಹೇಳಿದರು.
    ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಉಪಸ್ಥಿತರಿದ್ದರು. ಸಮಾಲೋಚನಾ ಸಮಿತಿಯ ಎಲ್ಲಾ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.

ನಾಗರಿಕ ವಿಮಾನಯಾನ ಸಚಿವರು ಹಾಗೂ ಸಮಿತಿಯ ಸದಸ್ಯರಿಂದ ಚಾಮುಂಡಿ ಬೆಟ್ಟ ಭೇಟಿ
ಮೈಸೂರು; ಅರಮನೆ ನಗರಿ ಮೈಸೂರಿಗೆ ಆಗಮಿಸಿದ ಕೇಂದ್ರ ನಾಗರಿಕ ವಿಮಾನಯಾನ ಸಚಿವರು, ನಾಗರಿಕ ವಿಮಾನಯಾನ ರಾಜ್ಯ ಸಚಿವರು ಹಾಗೂ ಸಮಾಲೋಚನಾ ಸಮಿತಿಯ ಸದಸ್ಯರು ಶುಕ್ರವಾರ ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ನಂತರ ಸಚಿವರು ಹಾಗೂ ಸಮಿತಿಯ ಸದಸ್ಯರು ಮೈಸೂರು ಅರಮನೆಗೆ ಭೇಟಿ ನೀಡಿ, ಮೈಸೂರಿನ ಶ್ರೀಮಂತ ರಾಜಪರಂಪರೆ, ವಾಸ್ತುಶಿಲ್ಪ ಮತ್ತು ಸಾಂಸ್ಕöÈತಿಕ ವೈಭವವನ್ನು ವೀಕ್ಷಿಸಿ, ಸಂತಸ ವ್ಯಕ್ತಪಡಿಸಿದರು. ಅರಮನೆಯ ಸೌಂದರ್ಯಕ್ಕೆ ಮಾರು ಹೋದರು.