
ಮೈಸೂರು: ಈ ಬಾರಿ ಅದ್ಧೂರಿಯಾಗಿ ನಡೆಯಲಿರುವ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಕ್ಕೆ ಮುನ್ಮ್ನಡಿಯಾಗಿರುವ ಗಜಪಯಣ ಬುಧವಾರ ನಡೆಯಲಿದ್ದು, ಕಾಡಿನಿಂದ ಅರಮನೆ ನಗರಿ ಮೈಸೂರಿಗೆ ಗಜಪಡೆಯ ಮೊದಲ ಹಂತದ ತಂಡ ಆಗಮಿಸಲಿದೆ.
ಇದೇ ಮೊದಲ ಬಾರಿಗೆ ಕ್ಯಾಪ್ಟನ್ ಆಯ್ಕೆಯಾಗದೆ ಮೊದಲ ಹಂತದಲ್ಲಿ 9 ಆನೆಗಳು ಮೈಸೂರಿಗೆ ಆಗಮಿಸುತ್ತಿರುವುದು ವಿಶೇಷವಾಗಿದೆ. ಮತ್ತೊಂದು ವಿಶೇಷವೆಂದರೆ ಮೈಸೂರಿಗೆ ಬಂದು ತಾಲೀಮು ಪೂರೈಸಿ, ಎಲ್ಲದರಲ್ಲೂ ಸೈ ಎನಿಸಿಕೊಂಡ ಆನೆಯನ್ನು ಗಜಪಡೆಯ ಕ್ಯಾಪ್ಟನ್ ಆಯ್ಕೆ ಮಾಡಿ ಘೋಷಣೆ ಮಾಡಲಾಗುತ್ತಿದೆ.
ಗಜಪಯಣಕ್ಕೆ ಚಾಲನೆ; ಜಿಲ್ಲೆಯ ಹುಣಸೂರು ತಾಲೂಕಿನ ನಾಗರಹೊಳೆ ರಾಷ್ಟಿçÃಯ ಉದ್ಯಾನವನ ವ್ಯಾಪ್ತಿಯ ವೀರನಹೊಸಹಳ್ಳಿ ಮುಖ್ಯದ್ವಾರದ ಮುಂಭಾಗ ಬುಧವಾರ ಬೆಳಗ್ಗೆ 10 ರಿಂದ 10.28 ಒಳಗೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಗಜಪಡೆಗೆ ಪುಷ್ಪಾರ್ಚನೆ ಮಾಡಿ, ಸಾಂಪ್ರದಾಯಿಕ ಪೂಜೆ ನೆರವೇರಿಸುವ ಮೂಲಕ ಗಜಪಯಣಕ್ಕೆ ಚಾಲನೆ ನೀಡಲಿದ್ದಾರೆ.
ಈ ಬಾರಿ ಗಜಪಯಣಕ್ಕೆ ಹೊಸ ರೂಪ ನೀಡಲಾಗಿದೆ, ಸುಮಾರು ನೂರಾರು ಜನರು, ಪ್ರವಾಸಿಗರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಮಹಿಳಾ ಸಂಘಟನೆಗಳಿAದ ವೀರನಹೊಸಹಳ್ಳಿಯ ಮುಖ್ಯದ್ವಾರಕ್ಕೆ ಆಗಮಿಸುವ ಗಜಪಡೆಗೆ ಅಭೂತಪೂರ್ವ ಸ್ವಾಗತ ಕೋರುತ್ತುರುವುದು ವಿಶೇಷ.
ಸ್ವಾಗತಕ್ಕೆ 15ಕ್ಕೂ ಹೆಚ್ಚು ಜಾನಪದ ಕಲಾತಂಡಗಳು ಸಜ್ಜಾಗಿವೆ. ಕಂಸಾಳೆ, ಡೊಳ್ಳು ಕುಣಿತ, ವೀರಗಾಸೆ, ಪೂಜಾ ಕುಣಿತ, ಆದಿವಾಸಿ ನೃತ್ಯ, ಟಿಬೆಟಿಯನ್ ನೃತ್ಯ, ಗೊರವರ ಕುಣಿತ, ಜೇನುಕುರುಬ ಮತ್ತು ಕಾಡು ಕುರುಬರ ಕುಣಿತದೊಂದಿಗೆ ಆನೆಗಳನ್ನು ಮೆರವಣಿಗೆಯಲ್ಲಿ ಬರಮಾಡಿಕೊಳ್ಳಲಾಗುತ್ತದೆ.
ಅಭಿಮನ್ಯುವಿಗೆ ಗೌರವಪೂರ್ವಕ ಬೀಳ್ಕೊಡುಗೆ : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ 6 ಬಾರಿ ಚಿನ್ನದ ಅಂಬಾರಿ ಹೊತ್ತು ಯಶಸ್ವಿಯಾಗಿ ತನ್ನ ಜವಾಬ್ದಾರಿ ನಿರ್ವಹಿಸಿ ಇದೀಗ ನಿವೃತ್ತಿಯಾಗುತ್ತಿರುವ ಕ್ಯಾಪ್ಟನ್ ಅಭಿಮನ್ಯುವಿಗೆ ಗಜಪಯಣದಲ್ಲಿ ಗೌರವಪೂರ್ವಕ ಬೀಳ್ಕೊಡುಗೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ವರ್ಷದ ಗಜಪಯಣವು ಅಭಿಮನ್ಯುವಿಗೆ ವಿಶೇಷ ಹಾಗೂ ಭಾವಪೂರ್ಣ ಗೌರವ ಸಲ್ಲಿಸುವ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ.
ಎರಡು ದಶಕಗಳಿಗೂ ಹೆಚ್ಚು ಕಾಲ ಮೈಸೂರು ದಸರಾ ಮಹೋತ್ಸವದೊಂದಿಗೆ ಅವಿನಾಭಾವ ಸಂಬAಧ ಹೊಂದಿರುವ ಅಭಿಮನ್ಯು, ದಸರಾ ಮಹೋತ್ಸವದಲ್ಲಿ ವಿವಿಧ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ನಂತರ ಚಿನ್ನದ ಅಂಬಾರಿ ಹೊರುವ ಪ್ರತಿಷ್ಠಿತ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದೆ. ಕಳೆದ ಆರು ವರ್ಷಗಳಿಂದ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿಯನ್ನು ಹೊತ್ತು ಸಾಗಿದ ಅಭಿಮನ್ಯುವಿನ ಗಾಂಭೀರ್ಯ, ಶಾಂತ ಸ್ವಭಾವ, ಶಿಸ್ತು ಹಾಗೂ ನಿಯಂತ್ರಿತ ನಡಿಗೆ ಮೈಸೂರು ದಸರಾ ಜಂಬೂಸವಾರಿಯ ಪ್ರಮುಖ ಆಕರ್ಷಣೆಯಾಗಿ ಗುರುತಿಸಿಕೊಂಡಿದೆ.
ಪ್ರಸ್ತುತ 60 ವರ್ಷ ವಯಸ್ಸನ್ನು ತಲುಪಿರುವ ಹಿನ್ನೆಲೆಯಲ್ಲಿ, ಅನ್ವಯವಾಗುವ ಸರ್ಕಾರದ ಮಾರ್ಗಸೂಚಿಗಳು ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯದ ನಿರ್ದೇಶನಗಳನ್ವಯ ಅಭಿಮನ್ಯುವನ್ನು ಸಕ್ರಿಯ ದಸರಾ ಕರ್ತವ್ಯಗಳಿಂದ ಗೌರವಪೂರ್ವಕವಾಗಿ ನಿವೃತ್ತಿಗೊಳಿಸಲಾಗುತ್ತಿದೆ. ಅರಣ್ಯ ಸಚಿವ ರಾಮಲಿಂಗಾರೆಡ್ಡಿ ವಿಶೇಷ ಗೌರವವನ್ನು ಸಲ್ಲಿಸಲಿದ್ದಾರೆ. ಗಜಪಯಣದ ಮೂಲಕ ಮೊದಲ ತಂಡದಲ್ಲಿ ಬರುವ ಆನೆಗಳಂದರೆ ದುಬಾರೆ ಆನೆ ಶಿಬಿರದಿಂದ ಧನಂಜಯ, ಪ್ರಶಾಂತ, ಗೋಪಿ, ಶ್ರೀರಾಮ, ಸುಗ್ರೀವ ಹಾಗೂ ಕಾವೇರಿ. ಬಳ್ಳೆ ಆನೆ ಶಿಬಿರದಿಂದ ಮಹೇಂದ್ರ ಹಾಗೂ ಲಕ್ಷಿ÷್ಮÃ ಆನೆ ಹಾಗೂ ಇದರ ಜೊತೆ ಭೀಮನಕಟ್ಟೆ ಆನೆ ಶಿಬಿರದಿಂದ ಏಕಲವ್ಯ ಆಗಮಿಸಲಿದ್ದಾರೆ.
ಇದರ ಜೊತೆ ಎರಡನೇ ತಂಡದಲ್ಲಿ ನಾಗರಹೊಳೆಯ ದೊಡ್ಡ ಹರವೆ ಆನೆ ಶಿಬಿರದಿಂದ ರೂಪ, ಬಂಡೀಪುರದ ರಾಂಪುರ ಆನೆ ಶಿಬಿರದಿಂದ ಚೈತ್ರಾ ಹಾಗೂ ಮತ್ತಿಗೋಡು ಆನೆ ಶಿಬಿರದಿಂದ ಶ್ರೀಕಂಠ ಬರಲಿದ್ದಾರೆ.
ನಾಗರಹೊಳೆಯ ಹೆಬ್ಬಾಗಿಲು ವೀರನಹೊಸಹಳ್ಳಿಯಿಂದ ಮೈಸೂರಿನ ಅರಣ್ಯ ಭವನಕ್ಕೆ ಲಾರಿಗಳಲ್ಲಿ ತರಲಾಗುವುದು. ಅರಣ್ಯ ಭವನದಲ್ಲಿ ಎರಡು ದಿನ ವಾಸ್ತವ್ಯ ಹೂಡಿ ನಂತರ ಆಗಸ್ಟ್ 28ರ ಬೆಳಗ್ಗೆ 9:52-10:19ರ ಶುಭ ತುಲಾ ಲಗ್ನದಲ್ಲಿ ಅರಮನೆಯ ಜಯಮಾರ್ತಾಂಡ ದ್ವಾರದ ಮೂಲಕ ಅರಮನೆಯ ಆಡಳಿತ ಮಂಡಳಿಯಿAದ 9 ಆನೆಗಳನ್ನು ಬರಮಾಡಿಕೊಳ್ಳಲಾಗುವುದು. ಆನಂತರ ಅರಮನೆಯ ಕೋಡಿ ಸೋಮೇಶ್ವರ ದೇವಾಲಯದ ಆವರಣದ ನಿರ್ಮಿಸಲಾಗಿರುವ ತಾತ್ಕಾಲಿಕ ಟೆಂಟ್ಗಳಲ್ಲಿ ಗಜಪಡೆ ವಾಸ್ತವ್ಯ ಮಾಡುತ್ತವೆ. ಅದೇ ದಿನ ಸಂಜೆ 9 ಆನೆಗಳನ್ನು ತೂಕ ಹಾಕಲಾಗುವುದು. ನಂತರ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಆನೆಗಳಿಗೆ ತಾಲೀಮು ನಡೆಸಲಾಗುತ್ತದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
.