Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋ ಆಯೋಜಿಸಲು ಕ್ರಮ; ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ


ಮೈಸೂರು ; ಈ ಬಾರಿಯ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾದಲ್ಲಿ ಏರ್ ಶೋ ನಡೆಸಲು ಕ್ರಮ ವಹಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ಬುಧವಾರ ಜಿಲ್ಲೆಯ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ದಸರಾ ಗಜಪಯಣ 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,
ಮೈಸೂರು ದಸರಾಕ್ಕೆ 400 ಕ್ಕೂ ಹೆಚ್ಚಿನ ವರ್ಷಗಳ ಇತಿಹಾಸವಿದೆ. ನಾಡಹಬ್ಬ ದಸರಾ ನಮ್ಮ ಸಂಸ್ಕöÈತಿ ಕಲೆ ಸಾಹಿತ್ಯ ವನ್ನು ಬಿಂಬಿಸುವ ಹಬ್ಬ. ದಸರಾ ವಿಶ್ವವಿಖ್ಯಾತ ವಾಗಿದೆ. ದಸರಾದಲ್ಲಿ ಪ್ರಮುಖ ಆಕರ್ಷಣೆ ಜಂಬೂಸವಾರಿ. ನಮ್ಮ ಗಜ ಪಡೆಯು ಜಂಬೂಸವಾರಿಯಲ್ಲಿ ಆನೆ ಅಂಬಾರಿಯನ್ನು ಹೊತ್ತು ಸಾಗುತ್ತದೆ. ಇಂದು ಆನೆಗಳನ್ನು ಮೈಸೂರಿಗೆ ಕರೆದುಕೊಂಡು ಹೋಗಿ 2 ತಿಂಗಳು ತರಬೇತಿ ನೀಡಲಾಗುತ್ತದೆ. ಅಲ್ಲಿ ಉತ್ತಮ ಪೌಷ್ಟಿಕ ಆಹಾರವನ್ನು ನೀಡಲಾಗುತ್ತದೆ. ಅಲ್ಲದೆ ವರ್ಷ ಪೂರ್ತಿ ಪೌಷ್ಠಿಕ ಆಹಾರ ನೀಡಿ ಆನೆಗಳ ಆರೋಗ್ಯ ತಪಾಸಣೆಯನ್ನು ಕಾಲ ಕಾಲಕ್ಕೆ ಮಾಡಲಾಗುತ್ತದೆ ಎಂದರು.
ಸುಮಾರು 6 ವರ್ಷಗಳ ಕಾಲ ಅಂಬಾರಿಯನ್ನು ಹೊತ್ತು ನಿವೃತ್ತಿ ಹೊಂದಿದ ಅಭಿಮನ್ಯು ಆನೆಗೆ ಇಂದು ಬೀಳ್ಕೊಡುಗೆ ನೀಡಲಾಗಿದೆ. ಅಭಿಮನ್ಯು ಆರೋಗ್ಯಯುತವಾಗಿ ನೂರಾರು ವರ್ಷ ಬದುಕಲಿ ಎಂದು ಹಾರೈಸುತ್ತೇನೆ. ಅರಣ್ಯದಂಚಿನ ರೈತರು ಸಾಗುವಳಿ ಮಾಡುತ್ತಿರುವ ಪ್ರದೇಶ ಹಾಗೂ ಮನೆ ಕಟ್ಟಿಕೊಂಡಿರುವ ಪ್ರದೇಶ ಅರಣ್ಯ ಇಲಾಖೆಗೆ ಸೇರಿದ್ದು ಎಂದು ತೊಂದರೆ ಆಗುತ್ತಿರುವ ಕುರಿತು ಹುಣಸೂರು ಶಾಸಕ ಜಿ.ಡಿ.ಹರೀಶ್‌ಗೌಡ ಅವರು ಗಮನ ಸೆಳೆದಿದ್ದು, ಈ ಬಗ್ಗೆ ಕಂದಾಯ ಮತ್ತು ಅರಣ್ಯ ಇಲಾಖೆಯ ಜಂಟಿ ಸರ್ವೇ ಮಾಡಿ ಪರಿಹಾರ ಕಂಡುಕೊಳ್ಳಲಾಗುವುದು. ಲಕ್ಷ÷್ಮಣ ತೀರ್ಥ ನದಿಗೆ ಚರಂಡಿ ನೀರು ಸೇರದಂತೆ ತಡೆಯಲು ಒಳಚರಂಡಿ ವ್ಯವಸ್ಥೆ ಮಾಡಲು ಅನುದಾನ ನೀಡಿ ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಯಲು ಬ್ಯಾರಿಕೇಡ್ ವ್ಯವಸ್ಥೆ ಹಾಗೂ ಬೇಲಿ ವ್ಯವಸ್ಥೆ ಮಾಡಲಾಗಿದೆ. ಪ್ರಾಣಿಗಳ ಜೊತೆ ಸೌಹಾರ್ದತೆಯಿಂದ ವರ್ತಿಸಬೇಕು. ಪ್ರಾಣಿಗಳಿಗೆ ತೊಂದರೆ ನೀಡದೇ ಕಾಡಿನಲ್ಲಿ ಸ್ವತಂತ್ರ÷್ಯವಾಗಿ ಇರಲು ಬಿಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ.ಹರೀಶ್‌ಗೌಡ ಮಾತನಾಡಿ,
ಈ ಬಾರಿ ಬರಗಾಲ ಬಂದಿದ್ದು, ಹುಣಸೂರು ತಾಲ್ಲೂಕಿನಲ್ಲಿ ಕೆರೆ ಕಟ್ಟೆಗಳಿಗೆ ನೀರು ತುಂಬಿಸಲು ಕಷ್ಟವಾಗಿದೆ. ಹುಣಸೂರು ತಾಲ್ಲೂಕಿನಲ್ಲಿ ಹೆಚ್ಚಿನ ಬೆಳೆ ನಷ್ಟವಾಗಿದೆ. ಹುಣಸೂರು ತಾಲ್ಲೂಕನ್ನು ಬರ ಪೀಡಿತ ತಾಲ್ಲೂಕು ಆಗಿ ಘೋಷಣೆ ಮಾಡಬೇಕು. ಕಾಡಂಚಿನ ಪ್ರದೇಶಗಳಲ್ಲಿ ರೈತರು ವ್ಯವಸಾಯ ಮಾಡುತ್ತಿದ್ದು, ಈ ಭೂಮಿ ಅರಣ್ಯ ಇಲಾಖೆಗೆ ಸೇರಿದ್ದು ಎಂದು ನೋಟಿಸ್ ಗಳನ್ನು ನೀಡಲಾಗುತ್ತಿದೆ. ಆದ್ದರಿಂದ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ಜಂಟಿ ಸರ್ವೇ ಮಾಡಿ ಅರಣ್ಯ ಗಡಿಯನ್ನು ಗುರುತಿಸಬೇಕು. ರೈತರಿಗೆ ತೊಂದರೆ ಆಗದಂತೆ ಸರ್ಕಾರ ಕ್ರಮ ವಹಿಸಬೇಕು. ಕಾಡುಪ್ರಾಣಿಗಳಿಂದ ಬೆಳೆ ನಷ್ಟ ಆದರೆ ಪರಿಹಾರವನ್ನು ನೀಡಬೇಕು ಎಂದು ಮನವಿ ಮಾಡಿದರು. ಲಕ್ಷ÷್ಮಣ ತೀರ್ಥ ನದಿ ಕಲುಷಿತವಾಗುತ್ತಿದ್ದು, ಒಳ ಚರಂಡಿ ನೀರನ್ನು ಲಕ್ಷ÷್ಮಣ ತೀರ್ಥ ನದಿಗೆ ಬಿಡದಂತೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ದಸರಾ ಗಜಪಯಣದ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲಾಯಿತು. ಆನೆಗಳ ಮಾವುತರಿಗೆ ಹಾಗೂ ಕಾವಡಿಗಳಿಗೆ ಸನ್ಮಾನ ಮಾಡಲಾಯಿತು. ಅರ್ಜುನ ಪ್ರಶಸ್ತಿಯನ್ನು ಅಭಿಮನ್ಯು ಮಾವುತ ವಸಂತ ಹಾಗೂ ಕಾವಡಿ ರಾಘು ಜೆ ಕೆ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕರಾದ ಅನಿಲ್ ಚಿಕ್ಕಮಾದು, ಡಿ.ರವಿಶಂಕರ್, ಕರ್ನಾಟಕ ಮೃಗಾಲಯದ ಅಧ್ಯಕ್ಷ ರಂಗಸ್ವಾಮಿ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ, ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪ ಅಮರನಾಥ್, ಪ್ರಾದೇಶಿಕ ಆಯುಕ್ತ ನಿತೀಶ್ ಪಾಟೀಲ್, ಜಿಲ್ಲಾಧಿಕಾರಿ ಜಿ.ಲಕ್ಷಿ÷್ಮÃಕಾಂತ ರೆಡ್ಡಿ, ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿಸಿ ಎಫ್ ಪ್ರಭುಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.