Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಬುಡಕಟ್ಟು ಭಾಷೆ ಹಾಗೂ ವಸ್ತು ಸಂಗ್ರಹಾಲಯದ ರಾಷ್ಟ್ರೀಯ ಸಮ್ಮೇಳನ ಯಶಸ್ವಿ : ನಿರ್ದೇಶಕ ಡಾ. ಅಶೋಕ್ ಡಿ.ಆರ್.


ಮೈಸೂರು: ಬುಡಕಟ್ಟು ಭಾಷೆಗಳು ಹಾಗೂ ವಸ್ತು ಸಂಗ್ರಹಾಲಯಗಳು ಕುರಿತು ಮೈಸೂರಿನಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ ಯಶಸ್ವಿಯಾಗಿದೆ ಎಂದು ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಡಾ. ಅಶೋಕ್ ಡಿ.ಆರ್. ತಿಳಿಸಿದರು.
ನಗರದ ಖಾಸಗಿ ಹೋಟೆಲ್ ನಲ್ಲಿ ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಕರ್ನಾಟಕ ಸರ್ಕಾರದ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ ಭಾರತೀಯ ಭಾಷಾ ಸಂಸ್ಥಾನ ಹಾಗೂ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ವತಿಯಿಂದ ನಡೆದ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದ 23 ರಾಜ್ಯಗಳಿಂದ 52 ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಈ ಸಮ್ಮೇಳನವು ಬುಡಕಟ್ಟು ಸಂಶೋಧನಾ ಸಂಸ್ಥೆಗಳು ಕೈಗೊಳ್ಳಬೇಕಾದ ಅಧ್ಯಯನಗಳು ಹಾಗೂ ಸಂಶೋಧನೆಗಳಿಗೆ ಮಾರ್ಗದರ್ಶಿಯಾಗಿದೆ ಎಂದರು.
ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪನಿರ್ದೇಶಕಿ ಹೆಚ್.ಎಸ್. ಗಿರಿಜಾಂಬ ಮಾತನಾಡಿ ಎರಡು ದಿನಗಳ ರಾಷ್ಟಿçÃಯ ಸಮ್ಮೇಳನದ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ತಿಳಿಸಿದರು.
ವಿಚಾರಗೋಷ್ಠಿಯಲ್ಲಿ : ನಿಜವಾಗಿಯೂ ಬುಡಕಟ್ಟು ಸಮುದಾಯಗಳು ಏನನ್ನು ಬಯಸುತ್ತವೆ, ಬುಡಕಟ್ಟು ಮತ್ತÄ ಬುಡಕಟ್ಟು ಸ್ವಾತಂತ್ರö್ಯ ಹೋರಾಟಗಾರರ ವಸ್ತು ಸಂಗ್ರಹಾಲಯಗಳ ಬಗ್ಗೆ, ವಸ್ತು ಸಂಗ್ರಹಾಲಯಗಳಲ್ಲಿ ಸ್ವತಂತ್ರö್ಯ ಹೋರಾಟದ ಕಥನಗಳ ಪ್ರತಿನಿಧೀಕರಣ, ಬುಡಕಟ್ಟುಗಳ ಸಾಂಸ್ಕೃತಿಕ ಸ್ಮೃತಿಗಳು ಹಾಗೂ ಅಸ್ಮಿತೆಯನ್ನು ಸಂರಕ್ಷಿಸುವಲ್ಲಿ ವಸ್ತುಸಂಗ್ರಹಾಲಯಗಳು, ವಸ್ತು ಸಂಗ್ರಹಾಲಯಗಳ ನಿರ್ಮಾಣದಲ್ಲಿ ಯೋಜನೆಯ ಪ್ರಕ್ರಿಯೆಯನ್ನು ಅರ್ಥೈಸಿಕೊಳ್ಳುವಿಕೆ, ವಸ್ತು ಸಂಗ್ರಹಾಲಯಗಳಲ್ಲಿ ಸಮಕಾಲೀನ ಪ್ರದರ್ಶನ ತಂತ್ರಗಳು, ವಸ್ತು ಸಂಗ್ರಹಾಲಯಗಳ ನಿರ್ಮಾಣ ನಿರ್ವಹಣೆಯಲ್ಲಿ ಬುಡಕಟ್ಟು ಸಂಸ್ಥೆಗಳು ಎದುರಿಸುತ್ತಿರುವ ಸವಾಲುಗಳನ್ನು ಕುರಿತು ವಿಚಾರಗಳನ್ನು ವಿನಿಮಯ ಮಾಡಿಕೊಂಡರು.
ಈ ಸಂದರ್ಭದಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಅನಂತ್‌ಕುಮಾರ್ ಪಾಂಡೆ, ಉಪಕಾರ್ಯದರ್ಶಿ ಗಣೇಶ್ ನಾಗರಾಜನ್, ರಾಜ್ಯ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಡಾ. ರಾಜ್‌ಕುಮಾರ್ ಕೆ.ಆರ್., ಸುರೇಶ್‌ರೆಡ್ಡಿ ಹೆಚ್.ಎಂ., ಟಿ.ಆರ್.ಐ.ನ ಉಪನಿರ್ದೇಶಕಿ ಹೆಚ್.ಎಸ್. ಗಿರಿಜಾಂಬ, ಜಿಲ್ಲಾ ಸಮನ್ವಯ ಅಧಿಕಾರಿ ಕೆ.ಎಂ. ಮಲ್ಲೇಶ್, ಭಾಗೀರಥಿ ಹಾಜರಿದ್ದರು.