Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪಂಚ ಗ್ಯಾರಂಟಿ ಯೋಜನೆಗಳು ಜನರ ಜೀವನ ಸುಧಾರಿಸಿವೆ: ಜಿಲ್ಲಾಧ್ಯಕ್ಷ ಅರುಣ್ ಕುಮಾರ್


ಮೈಸೂರು: ರಾಜ್ಯ ಸರ್ಕಾರವು ಅನುಷ್ಠಾನಗೊಳಿಸಿ ಯಶಸ್ವಿಯಾಗಿ ಮುನ್ನೆಡೆಸುತ್ತಿರುವ ‘ಪಂಚ ಗ್ಯಾರಂಟಿ’ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆ ಕಂಡಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷ ಅರುಣ್ ಕುಮಾರ್ ತಿಳಿಸಿದರು.
ಮೈಸೂರು ತಾಲ್ಲೂಕಿನ ಗೋಪಾಲಪುರ ಗ್ರಾಮ ಪಂಚಾಯಿತಿ ಹಾಗೂ ಪಂಚ ಗ್ಯಾರಂಟಿ ಯೋಜನೆಯ ಇಲಾಖೆಗಳ ಸಹಯೋಗದೊಂದಿಗೆ ಗೋಪಾಲಪುರ ಗ್ರಾಮದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಯ ಅರಿವು ಮತ್ತು ಸಸಿ ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,
ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರ ಅಭಿವೃದ್ಧಿಗೆ ಪೂರಕವಾಗಿದ್ದು, ಇದರಿಂದ ಬಡ, ಮಧ್ಯಮ ವರ್ಗದ ಜನರಿಗೆ ಆರ್ಥಿಕ ಭದ್ರತೆ ದೊರಕಿದೆ. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯವು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ನಿಗಾವಹಿಸಬೇಕು ಎಂದು ಹೇಳಿದರು.
ತಾಲ್ಲೂಕು ಅಧ್ಯಕ್ಷ ಗುರುಸ್ವಾಮಿ ಮಾತನಾಡಿ, ಗ್ಯಾರಂಟಿ ಯೋಜನೆಗಳು ಪ್ರಮುಖವಾಗಿ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಿವೆ. ಗೃಹಲಕ್ಷಿ÷್ಮÃ ಹಣದಲ್ಲಿ ಮಹಿಳೆಯರು ಮನೆ ಖರ್ಚನ್ನು ನಿಭಾಸುತ್ತಿದ್ದಾರೆ. ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಸಾಕಷ್ಟು ಹಣ ಉಳಿತಾಯವಾಗಿದ್ದು, ಅವರ ಆತ್ಮವಿಶ್ವಾಸ ಹೆಚ್ಚಿದೆ ಎಂದು ನುಡಿದರು.
ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ ಪ್ರಸ್ತಾವಿಕವಾಗಿ ಮಾತನಾಡಿ, ಜನರ ಸ್ವಾವಲಂಬನೆ ಬದುಕಿಗೆ ಗ್ಯಾರಂಟಿ ಯೋಜನೆಗಳು ನೆರವಾಗಿದ್ದು, ಅನೇಕ ಬಡ ಕುಟುಂಬಗಳ ಆರ್ಥಿಕ ಹೊರೆ ತಗ್ಗಿದೆ. ಅರ್ಹ ಜನರು ಗ್ಯಾರಂಟಿ ಯೋಜನೆಗಳ ಉಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಗ್ಯಾರಂಟಿ ಸಮಿತಿ ಸದಸ್ಯರಾದ ನಾಗರಾಜ ಮೂರ್ತಿ, ರವಿ, ಮುರುಡಪ್ಪ, ಸುರೇಶ್, ಗ್ರಾಮ ಪಂಚಾಯತಿ ಆಡಳಿತ ಅಧಿಕಾರಿ ವೆಂಕಟಪ್ಪ, ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ಕೆ.ರುಕ್ಮಾಂಗದ, ಪಿಡಿಒ ಪ್ರದೀಪ್ ಕುಮಾರ್,ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು