
ಹೆಚ್.ಡಿ.ಕೋಟೆ; ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಹುಲಿಯೊಂದು ಸಿಕ್ಕಿ ಬಿದ್ದು ಸೆರೆಯಾದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಹೊಸಹೊಳಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಲಿ ಪ್ರತ್ಯಕ್ಷಗೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು.
ಕಳೆದ ಕೆಲವು ದಿನಗಳಿಂದ ಹೊಸಹೊಳಲು ಗ್ರಾಮದ ಸುತ್ತಮುತ್ತ ಹುಲಿ ಸಂಚರಿಸುತ್ತಿರುವುದು ಕಂಡುಬAದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಭಯಭೀತರಾಗಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹುಲಿಯ ಚಲನವಲನದ ಮೇಲೆ ನಿಗಾ ವಹಿಸಿ, ಹುಲಿ ಸೆರೆಗೆ ಸೂಕ್ತ ಸ್ಥಳದಲ್ಲಿ ಬೋನ್ ಅಳವಡಿಸಿದ್ದರು. ಇದೀಗ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಹುಲಿ ಸೆರೆಯಾಗಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.ಸೆರೆ ಸಿಕ್ಕ ಹುಲಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಅಲ್ಲಿಂದ ಸ್ಥಳಾಂತರಿಸಿದರು.