Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕ್ರೀಡಾಕೂಟದಲ್ಲಿ ಜೆಎಸ್‌ಎಸ್ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರಿಗೆ ಒಲಿದ ಸಮಗ್ರ ಚಾಂಪಿಯನ್ ಪ್ರಶಸ್ತಿ


ಮೈಸೂರು; ನಗರ ಅಂತರ ಕಾಲೇಜುಗಳ ಕ್ರೀಡಾಕೂಟದಲ್ಲಿ ಜೆಎಸ್‌ಎಸ್ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರಿಗೆ ಸಮಗ್ರ ಚಾಂಪಿಯನ್ ಪ್ರಶಸ್ತಿ ಒಲಿದಿದೆ.
ಕ್ರೀಡಾ ವಿದ್ಯಾರ್ಥಿನಿಯರು ಕ್ರೀಡಾಕೂಟದಲ್ಲಿ ಭಾಗವಹಿಸಿ ಥ್ರೋಬಾಲ್ ಪ್ರಥಮ ಸ್ಥಾನ, ಬಾಲ್ ಬ್ಯಾಡ್ಮಿಂಟನ್, ಕಬಡ್ಡಿ ಟೆನ್ನಿಕಾಯ್ಟ್ ದ್ವಿತೀಯ ಸ್ಥಾನ, ವಾಲಿಬಾಲ್ ತೃತೀಯ ಸ್ಥಾನ ಮತ್ತು ಟೇಬಲ್ ಟೆನ್ನಿಸ್, ಬ್ಯಾಡ್ಮಿಂಟನ್ ನಾಲ್ಕನೇ ಸ್ಥಾನ ಪಡೆಯುವುದರ ಜೊತೆಗೆ ಮೈಸೂರು ನಗರ ಮೈಸೂರು ನಗರ ಅಂತರ ಕಾಲೇಜು ಕ್ರೀಡಾಕೂಟದಲ್ಲಿ ಮಹಿಳಾ ವಿಭಾಗದಲ್ಲಿ ಸಮಗ್ರ ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡಿರುತ್ತಾರೆ.
ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆಗೈದಿರುವ ವಿದ್ಯಾರ್ಥಿನಿಯರಿಗೆ ಪ್ರಾಚಾರ್ಯ ಡಾ. ರೇಚಣ್ಣ, ಕಛೇರಿ ಅಧ್ಯಕ್ಷ ಶಿವಶಂಕರಪ್ಪ ಎಸ್ ಹಾಗೂ ಮೋಹನ್ ಕುಮಾರ್ ಕೆ ಎಸ್, ದೈಹಿಕ ಶಿಕ್ಷಣ ನಿರ್ದೇಶಕ ಎ. ರಶ್ಮಿ , ಕ್ರೀಡಾ ಕಾರ್ಯದರ್ಶಿ ತೇಜಸ್ವಿನಿ ಹಾಗೂ ಕಾಲೇಜಿನ ಅಧ್ಯಾಪಕರು, ಅಧ್ಯಾಪಕೇತರ ವರ್ಗದವರು ಹಾಗೂ ವಿದ್ಯಾರ್ಥಿನಿಯರೆಲ್ಲರೂ ಕಾಲೇಜಿಗೆ ಕೀರ್ತಿ ತಂದಿರುವ ವಿದ್ಯಾರ್ಥಿನಿಯರನ್ನು ಅಭಿನಂದಿಸಿದರು.