Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಅಪರಿಚಿತ ವ್ಯಕ್ತಿಯ ಶವ ಪತ್ತೆ
ಮೈಸೂರು: ನಗರದ ಕೆ.ಆರ್.ಆಸ್ಪತ್ರೆಯ ದೇವರಾಜ ಪೊಲೀಸ್ ಠಾಣೆಯ ಉಪ ಠಾಣಾ ಸರಹದ್ದಿನಲ್ಲಿ ಬೋಗಾದಿ ರಿಂಗ್ ರಸ್ತೆಯ ದೇಶಿಲಿಂಗೇಶ್ವರ ದೇವಸ್ಥಾನದ ಮುಂಬಾಗದ ಫುಟ್ಬಾತ್ ರಸ್ತೆಯಲ್ಲಿ ನಿತ್ರಾಣನಾಗಿದ್ದ ಸುಮಾರು 40-45 ವರ್ಷದ ಅಪರಿಚಿತ ವ್ಯಕ್ತಿಯನ್ನು ಆಂಬುಲೆನ್ಸ್ನಲ್ಲಿ ಕರೆತಂದು ಚಿಕಿತ್ಸೆಗೆಂದು ದಾಖಲಿಸಿದ್ದು, ಸದರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಪ್ರಕರಣ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಮೃತ ವ್ಯಕ್ತಿ 5.0 ಅಡಿ ಎತ್ತರ, ಬಿಳಿ ಹಾಗೂ ಕಪ್ಪು ಬಣ್ಣದ ತಲೆ ಕೂದಲು, ಗಡ್ಡ ಮತ್ತು ಮೀಸೆ ಬಿಟ್ಟಿರುತ್ತಾರೆ. ಕಪ್ಪು ಮೈಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು, ನೀಲಿ ಹಾಗೂ ಕೇಸರಿ ಬಣ್ಣದ ಶರ್ಟ್ಗಳ ಒಂದರ ಮೇಲೊಂದರAತೆ ಧರಿಸಿದ್ದು, ಗ್ರೇ ಬಣ್ಣದ ಪ್ಯಾಂಟ್ ಧರಿಸಿದ್ದು, ಕತ್ತಿನಲ್ಲಿ ಗಾಜಿನಂತಿರುವ 3-4 ಮಣಿಸರ ಇರುತ್ತವೆ.
ಮೃತನ ವಾರಸಯದಾರರ ಬಗ್ಗೆ ಮಾಹಿತಿ ಕಂಡು ಬಂದಲ್ಲಿ, ಸರಸ್ವತಿಪುರಂ ಪೊಲೀಸ್ ಠಾಣಾ ದೂರವಾಣಿ ಸಂಖ್ಯೆ 0821-2418123, 2418323 ಅಥವಾ ಮೈಸೂರು ನಗರದ ಪೊಲೀಸ್ ಕಂಟ್ರೋಲ್ ರೂಂ ನಂ-0821-2418339 ನ್ನು ಸಂಪರ್ಕಿಸಬಹುದೆAದು ಸರಸ್ವತಿಪುರಂ ಪೊಲೀಸ್ ಠಾಣೆಯ ಠಾಣಾಧಿಕಾರಿ ನಾಗರಾಜು ಎಸ್., ಎ.ಎಸ್.ಐ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.