Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜೆಎಸ್‌ಎಸ್ ಪಬ್ಲಿಕ್ ಶಾಲೆ ವಿದ್ಯಾರ್ಥಿಗೆ ಬೆಳ್ಳಿ ಪದಕ – ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ


ಮೈಸೂರು; ರಾಯಚೂರಿನಲ್ಲಿ ಸಿಬಿಎಸ್‌ಇ ವತಿಯಿಂದ ಆಯೋಜಿಸಲಾದ ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮೈಸೂರಿನ ಜೆ ಎಸ್ ಎಸ್ ಪಬ್ಲಿಕ್ ಶಾಲೆಯ ೧೦ನೇ ತರಗತಿಯ ವಿದ್ಯಾರ್ಥಿ ಸಮರ್ಥ್ ಎಸ್., ಅತ್ಯುತ್ತಮ ಸಾಧನೆ ಮಾಡಿದ್ದಾರೆ.
೧೭ ವರ್ಷದೊಳಗಿನ ವಿಭಾಗದ ೮೦೦ ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದು ಶಾಲೆಗೆ ಕೀರ್ತಿ ತಂದಿದ್ದಾರೆ.
ಅವರ ಈ ಅತ್ಯುತ್ತಮ ಸಾಧನೆಯ ಹಿನ್ನೆಲೆಯಲ್ಲಿ ಅವರು ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ಮಟ್ಟದ ಕ್ರೀಡಾಕೂಟವು ಪಂಜಾಬ್ನ ಪಟಿಯಾಲದಲ್ಲಿ ಅ. ೧೫ ರಿಂದ ಅಕ್ಟೋಬರ್ ೨೦ ರವರೆಗೆ ನಡೆಯಲಿದೆ.
೧೦ ನೇ ತರಗತಿಯ ವಿದ್ಯಾರ್ಥಿನಿ ಖುಷಿ ಬಿ. ೧೭ ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಶಾಟ್ಪುಟ್ ಮತ್ತು ಡಿಸ್ಕಸ್ ಥ್ರೋ ಸ್ಪರ್ಧೆಗಳಲ್ಲಿ ಕಂಚಿನ ಪದಕಗಳನ್ನು ಗೆದ್ದು ಶಾಲೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕರು ಹಾಗೂ ಸಹಪಾಠಿಗಳು ಅಭಿನಂದನೆಗಳನ್ನು ಸಲ್ಲಿಸಿ, ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.