Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ನಿಧಿ ಅರಿವು ಕಾರ್ಯಕ್ರಮ


ತಿ.ನರಸೀಪುರ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮೈಸೂರು ಹಾಗೂ ಟಿ. ನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಯುವ ನಿಧಿ ಯೋಜನೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಟಿ. ನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಮಾತನಾಡಿ,
ಯುವ ನಿಧಿ ಯೋಜನೆಯ ಉದ್ದೇಶ, ಅರ್ಹತೆ ಹಾಗೂ ಯುವಜನರಿಗೆ ದೊರೆಯುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಯೋಜನೆಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು..
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಉದಯಕುಮಾರ್ ಹೆಚ್.ವಿ., ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ಸಾಮಯೋಗೇಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಹುಣಸೂರು ಬಸವಣ್ಣ, ಟಿ. ನರಸೀಪುರ ತಾಲೂಕು ಕಾರ್ಯನಿರ್ವಹಣಾಧಿಕಾರಿ ರಂಗಸ್ವಾಮಿ, ಜಿಲ್ಲಾ ಉದ್ಯೋಗ ಮತ್ತು ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕ ಮಂಜುನಾಥ್ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.