Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಎನ್.ಐ.ಇ ನಲ್ಲಿ ನಡೆದ ಬೃಹತ್ ರಕ್ತದಾನ ಶಿಬಿರ; 465 ಯುನಿಟ್ ರಕ್ತ ಸಂಗ್ರಹ


ಮೈಸೂರು ; ನಗರದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿAಗ್, ಎನ್.ಎಸ್.ಎಸ್, ಯೂತ್ ರೆಡ್ ಕ್ರಾಸ್ ಮತ್ತು ರೋಟರಿ ಕ್ಲಬ್ ಮೈಸೂರು ಸಹಯೋಗದೊಂದಿಗೆ ಸಂಸ್ಥೆಯ ದಕ್ಷಿಣ ಮತ್ತು ಉತ್ತರ ಎರಡೂ ಕ್ಯಾಂಪಸ್‌ಗಳಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
ವಿದ್ಯಾರ್ಥಿಗಳು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಸಕ್ರಿಯ ಭಾಗವಹಿಸುವಿಕೆಯೊಂದಿಗೆ ಒಟ್ಟು 465 ಯುನಿಟ್ ರಕ್ತ ಸಂಗ್ರಹವಾಗಿದೆ.
ದಕ್ಷಿಣ ಕ್ಯಾಂಪಸ್‌ನಲ್ಲಿ ಪ್ರಾಂಶುಪಾಲ ಡಾ. ನಾಗೇಂದ್ರ ಪರಾಶರ್ ಹಾಗೂ ಉತ್ತರ ಕ್ಯಾಂಪಸ್‌ನಲ್ಲಿ ಉಪ ಪ್ರಾಂಶುಪಾಲ ಡಾ. ಲಿಖಿತ್ ಕುಮಾರ್ ಎಂ.ವಿ ಸಿಬ್ಬಂದಿ ಸಂಯೋಜಕರು ಮತ್ತು ವಿದ್ಯಾರ್ಥಿ ಸ್ವಯಂಸೇವಕರ ಸಮ್ಮುಖದಲ್ಲಿ ಚಾಲನೆ ನೀಡಿದರು.
ದಕ್ಷಿಣ ಕ್ಯಾಂಪಸ್‌ನಿAದ 250 ಹಾಗೂ ಉತ್ತರ ಕ್ಯಾಂಪಸ್‌ನಿAದ 215 ಯುನಿಟ್ ರಕ್ತ ಸಂಗ್ರಹವಾಯಿತು. ಸಂಗ್ರಹವಾದ ಪ್ರತಿಯೊಂದು ಯುನಿಟ್ ರಕ್ತವೂ ಮೂರು ಜೀವಗಳನ್ನು ಉಳಿಸುವ ಸಾಮರ್ಥ್ಯವನ್ನು ಹೊಂದಿದ್ದು, ಈ ಒಟ್ಟಾರೆ ಕೊಡುಗೆಯು ಸುಮಾರು 1,400 ಜೀವಗಳಿಗೆ ಆಸರೆಯಾಗಲಿದೆ. ಈ ಶಿಬಿರದಲ್ಲಿ ವಿದ್ಯಾರ್ಥಿನಿಯರು ಸಮಾನವಾಗಿ ಮತ್ತು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು ಸಮಾಜ ಸೇವೆಯಲ್ಲಿ ತಮ್ಮ ಬದ್ಧತೆಯನ್ನು ಮೆರೆದಿರುವುದು ವಿಶೇಷವಾಗಿತ್ತು.