Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿದ್ಯಾರ್ಥಿಗಳಿಗೆ ಪಠ್ಯಕ್ರಮದಷ್ಟೇ ಕ್ರೀಡೆಯೂ ಮುಖ್ಯ; ಕೆ. ಮಹದೇವ


ಮೈಸೂರು; ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿಯವರ 111ನೇ ಜಯಂತಿ ಮಹೋತ್ಸವದ ಅಂಗವಾಗಿ, ಮೈಸೂರಿನ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಮಹಿಳಾ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಗುರುವಾರ ಬಾಲಕಿಯರಿಗಾಗಿ ರಾಜ್ಯ ಮಟ್ಟದ ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್ ಹಾಗೂ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಏಕಲವ್ಯ ಹಾಗೂ ವಿಶ್ವಮಾನವ ಪ್ರಶಸ್ತಿ ಪುರಸ್ಕöÈತರು, ಬಾಲ್ ಬ್ಯಾಡ್ಮಿಂಟನ್ ಆಟಗಾರ ಕೆ. ಮಹದೇವ ಮಾತನಾಡಿ, ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವಲ್ಲಿ ಪಠ್ಯಕ್ರಮದಷ್ಟೇ ಕ್ರೀಡೆಯೂ ಪ್ರಮುಖ ಪಾತ್ರ ವಹಿಸುತ್ತದೆ. ಕ್ರೀಡೆಯು ವಿದ್ಯಾರ್ಥಿ ಜೀವನದ ಅವಿಭಾಜ್ಯ ಅಂಗವಾಗಬೇಕು ಎಂದು ತಿಳಿಸಿದರು.
ಜೀವನದಲ್ಲಿ ಯಶಸ್ಸು ಸಾಧಿಸಲು ವಿದ್ಯಾರ್ಥಿನಿಯರು ತಮ್ಮ ನೈಜ ಗುರಿಗಳನ್ನು ಗುರುತಿಸಿಕೊಳ್ಳಬೇಕು ಹಾಗೂ ಮುಂದಿನ ಪೀಳಿಗೆಗೆ ಆದರ್ಶಪ್ರಾಯರಾಗಬೇಕು. ಇಂದಿನ ಜಗತ್ತಿನಲ್ಲಿ ಮಹಿಳೆಯರು ಎಲ್ಲವನ್ನು ಸಾಧಿಸುವುದಕ್ಕೆ ಸಾಧ್ಯವಿದೆ ಎಂದರು.
ಅಧ್ಯಕ್ಷೀಯ ನುಡಿಗಳನ್ನಾಡಿದ ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ಬಿ. ನಿರಂಜನಮೂರ್ತಿ, ಕ್ರೀಡೆಯು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ನೆರವಾಗುತ್ತದೆ. ವಿದ್ಯಾರ್ಥಿನಿಯರು ಕ್ರೀಡಾಸ್ಫೂರ್ತಿಯಿಂದ ಆಟವಾಡಿ ಸಾಧನೆ ತೋರಬೇಕೆಂದು ಪ್ರೋತ್ಸಾಹಿಸಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ. ರೇಚಣ್ಣ, ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಟಿ.ಗುರುಪಾದಸ್ವಾಮಿ, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕಿ ರಶ್ಮಿ, ಧಾತ್ರಿ, ಮೋನಿಕಾ.ಸಿ, ಅಮೃತ ಕೆ. ಎಂ, ಚರಿಷ್ಮ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
.