Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಚಿವ ಸತೀಶ್ ಜಾರಕಿ ಮನೆ ಮೇಲೆ ಇಡಿ ದಾಳಿ ಖಂಡಿಸಿ ದಲಿತ ಸಂಘಟನೆಗಳಿ0ದ ಪ್ರತಿಭಟನೆ


ಮೈಸೂರು: ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ, ಆಪ್ತರು ಹಾಗೂ ವಿವಿಧ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಯನ್ನು ಖಂಡಿಸಿ ದಲಿತ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಟೌನ್‌ಹಾಲ್ ಮುಂಭಾಗದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ಹಾಗೂ ಇಡಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ನಗರಪಾಲಿಕೆಯ ಮಾಜಿ ಮೇಯರ್ ಪುರುಷೋತ್ತಮ್ ಮಾತನಾಡಿ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗೆ ಬದ್ಧವಾಗಿ ಬೆಳೆದಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ನಾಯಕತ್ವವನ್ನು ಇಆ ದಾಳಿಗಳ ಮೂಲಕ ದಮನಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಇಆಯಂತಹ ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಗಳಿಗೆ ಬಳಸುವುದನ್ನು ನಿಲ್ಲಿಸಬೇಕು. ಇಡಿ ದಾಳಿಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ ಎಂದರು. ಪ್ರತಿಭಟನೆಯಲ್ಲಿ ದಲಿತ ಸಂಘಟನೆಗಳ ಮುಖಂಡರುಗಳು, ಕಾರ್ಯಕರ್ತರುಗಳು ಭಾಗವಹಿಸಿದ್ದರು.