
ಮೈಸೂರು ; ನಗರದ ಕೆ.ಆರ್. ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಸಂಬAಧಿಸಿದAತೆ ರಾಜಕೀಯ ಪಕ್ಷಗಳ ಸಭೆಯನ್ನು ಶಾರದಾದೇವಿನಗರ ವಲಯ ಕಚೇರಿ 3ರಲ್ಲಿ ನಡೆಸಲಾಯಿತು.
ಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಸೇರಿದಂತೆ ವಿವಿಧ ಪ್ರಮುಖ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು ಸಭೆಯಲ್ಲಿ ಕ್ಷೇತ್ರದ ಮತದಾರರ ಪಟ್ಟಿಗೆ ಸಂಬAಧಿಸಿದ ವಿಷಯಗಳು, ವಿಶೇಷ ತೀವ್ರ ಪರಿಷ್ಕರಣೆ (SIಖ) ಪ್ರಕ್ರಿಯೆ, ಮತದಾರರ ವಿವರಗಳ ಪರಿಶೀಲನೆ ಹಾಗೂ ರಾಜಕೀಯ ಪಕ್ಷಗಳ ಸಹಕಾರದ ಕುರಿತು ಚರ್ಚಿಸಲಾಯಿತು.
ಮತದಾರರ ಪಟ್ಟಿಯ ಪರಿಷ್ಕರಣಾ ಕಾರ್ಯವು ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ನಡೆಯಲು ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಲಾಯಿತು.
ಸಭೆಯಲ್ಲಿ ಭಾಗವಹಿಸಿದ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ತಮ್ಮ ಅಭಿಪ್ರಾಯಗಳು ಹಾಗೂ ಸಲಹೆಗಳನ್ನು ಹಂಚಿಕೊAಡರು