ದಸರಾ ಬಂದೋ ಬಸ್ತ್ಗಾಗಿ 6 ಸಾವಿರ ಪೊಲೀಸರ ನಿಯೋಜನೆ; ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್
ಮೈಸೂರು: ಈ ಬಾರಿ ಅದ್ಧೂರಿಯಾಗಿ ಜರುಗಲಿರುವ ನಾಡ ಹಬ್ಬ ಮೈಸೂರು ದಸರಾ ಭದ್ರತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಆರು ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ತಿಳಿಸಿದರು.ಶುಕ್ರವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ನಾಡ ಹಬ್ಬ ಮೈಸೂರು ದಸರಾ ಬಂದೋ ಬಸ್ತ್ ಕೆಲಸಕ್ಕಾಗಿ 5,161 ಸಿವಿಲ್ ಹಾಗೂ ಸಂಚಾರಿ ಪೊಲೀಸರು, 33 ಕೆಎಸ್‌ಆರ್‌ಪಿ ತುಕಡಿ, 25 ಡಿಎಆರ್ ತುಕಡಿ, 1500 ಹೋಮ್…