ಚುನಾವಣಾ ಆಯುಕ್ತರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ರಾಜಕೀಯ ಪ್ರೇರಿತ; ಸಂತೋಷ್ ಕುಮಾರ್ ಬಿ. ಎಂ.
ಮೈಸೂರು: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಪ್ರತಿಭಟನೆ, ರಾಜೀನಾಮೆಗೆ ಆಗ್ರಹ ಮತ್ತು ಮಾಡುತ್ತಿರುವ ಆರೋಪಗಳು ರಾಜಕೀಯ ಉದ್ದೇಶದಿಂದ ಕೂಡಿವೆ ಎಂದು ಬಿಜೆಪಿ ಮೈಸೂರು ನಗರ ಮಾಧ್ಯಮ ಸಹ ಸಂಚಾಲಕ ಸಂತೋಷ್ ಕುಮಾರ್ ಬಿ. ಎಂ. ತೀವ್ರವಾಗಿ ಆಕ್ಷೇಪಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ಚುನಾವಣಾ ಆಯೋಗದ ವಿರುದ್ಧ ಘೋಷಣೆ ಕೂಗುವುದು ಸುಲಭ; ಆದರೆ ಆರೋಪವನ್ನು ದಾಖಲೆಗಳೊಂದಿಗೆ ಸಾಬೀತುಪಡಿಸುವುದು ಮುಖ್ಯ. SIಖ ಕುರಿತು ಕಾಂಗ್ರೆಸ್ಗೆ ನಿಜವಾಗಿಯೂ ಆಕ್ಷೇಪವಿದ್ದರೆ, ಯಾವ ಕ್ಷೇತ್ರದಲ್ಲಿ…