ಕ್ರೀಡೆ ಕೇವಲ ಸೋಲು ಗೆಲುವಿನ ಆಟವಲ್ಲ, ವಿದ್ಯಾರ್ಥಿಗಳಲ್ಲಿ ಶಿಸ್ತು, ಏಕಾಗ್ರತೆಯನ್ನು ಬೆಳೆಸುವ ಜೀವನದ ಪಾಠ
ನಂಜನಗೂಡು; ಕ್ರೀಡೆ ಕೇವಲ ಸೋಲು ಗೆಲುವಿನ ಆಟವಲ್ಲ, ವಿದ್ಯಾರ್ಥಿಗಳಲ್ಲಿ ಶಿಸ್ತು, ಏಕಾಗ್ರತೆಯನ್ನು ಬೆಳೆಸುವ ಜೀವನದ ಪಾಠದ ಜೊತೆಗೆ ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಹೇಳಿದರು. ಅವರು ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ತಾಲೂಕು ಶಿಕ್ಷಣ ಇಲಾಖೆ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಏರ್ಪಡಿಸಲಾಗಿದ್ದ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ಕ್ರೀಡಾಕೂಟ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಜೊತೆಗೆ, ಎಲ್ಲರೊಡನೆ ಒಂದಾಗಿ ಬೆರೆಯಲು…