ರಾಜ್ಯದಲ್ಲಿ ಸದ್ಯಕ್ಕೆ ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ: ಸಚಿವ ಕೆ.ಜೆ.ಜಾರ್ಜ್
ಮೈಸೂರು: ರಾಜ್ಯದಲ್ಲಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಪ್ರಶ್ನೆಯೇ ಇಲ್ಲ, ಆದರೆ ಮುಂದಿನ ದಿನಗಳಲ್ಲಿ ನಪರಿಸ್ಥಿತಿ ಕೈಮೀರಿದರೆ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ತೀರ್ಮಾನ ಮಾಡುತ್ತೇವೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.ಭಾನುವಾರ ನಗರದ ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಭೇಟಿ ನೀಡಿ, ಅಲ್ಲಿ ದಸರಾಗೆ ಕೈಗೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ. ಆದರೆ ಸುಮಾರು ಒಂದು ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ. ಕಳೆದ ಏಳು ತಿಂಗಳಿAದ ವಿದ್ಯುತ್ ಕೊರತೆ…