ಮಾಜಿ ಸಂಸದ ಪ್ರತಾಪ್ಸಿಂಹಗೆ ಮಧ್ಯಂತರ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಣೆ
ಮೈಸೂರು; ಜಿಲ್ಲೆಯ ಟಿ.ನರಸೀಪುರದಲ್ಲಿ ಗಣೇಶ ವಿಸರ್ಜನೆ ವೇಳೆ ದಲಿತ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ದಾಖಲಾಗಿರುವ ಜಾತಿ ನಿಂದನೆ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ ಮಧ್ಯಂತರ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿದೆ.ಟಿ.ನರಸೀಪುರದಲ್ಲಿ ಸೆ.18ರಂದು ನಡೆದ ಗಣೇಶ ವಿಸರ್ಜನೆ ಶೋಭಾಯಾತ್ರೆ ವೇಳೆ ದಲಿತ ಸಂಘಟನೆಗಳ ಹೋರಾಟಗಾರರನ್ನು ಅವಮಾನ ಮಾಡಿ ಮತ್ತು ದಲಿತ ಸಮುದಾಯದ ಸಾಂಸ್ಕತಿಕ ಅಸ್ಮಿತೆಯಾದ ನೀಲಿ ಶಾಲಿನ ಬಗ್ಗೆ ಅವಹೇಳನ ಮಾಡಿದ ಆರೋಪದಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಪ್ರತಾಪ್…