ಇನ್ಸ್ಪೆಕ್ಟರ್ ಧನಂಜಯ್ ವಿರುದ್ಧ ಎಸ್ಪಿಗೆ ದೂರು ನೀಡಿದ ಸ್ನೇಹಮಯಿ ಕೃಷ್ಣ
ಮೈಸೂರು: ಜಿಲ್ಲೆಯ ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆ ಪ್ರಕರಣದಲ್ಲಿ ಯುವಕರಿಗೆ ಧಮ್ಕಿ ಹಾಕಿದ ಆರೋಪ ಎದುರಿಸುತ್ತಿರುವ ಪೊಲೀಸ್ ಇನ್ಸ್ಪೆಕ್ಟರ್ ಧನಂಜಯ್ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.ತಮ್ಮ ವರ್ಗಾವಣೆ ಆದೇಶವನ್ನು ರದ್ದುಪಡಿಸಲು ಧನಂಜಯ್ ಅವರು ಪ್ರಭಾವ ಬಳಸಿದ್ದಾರೆ. ವರ್ಗಾವಣೆ ಆದೇಶವನ್ನು ಒಂದೇ ದಿನದಲ್ಲಿ ರದ್ದುಗೊಳಿಸಿ, ಅದೇ ಠಾಣೆಯಲ್ಲಿ ಮುಂದುವರೆದಿರುವ ಬಗ್ಗೆ ಆರೋಪಿಸಲಾಗಿದೆ. ಅಲ್ಲದೇ ಇನ್ಸ್ಪೆಕ್ಟರ್ ಧನಂಜಯ್ ಸಮಾಜದಲ್ಲಿ ಅಶಾಂತಿಗೆ ಕಾರಣರಾಗಿದ್ದಾರೆ ಮತ್ತು ಧರ್ಮಗಳ ನಡುವೆ ದ್ವೇಷ ಮೂಡಿಸುವಂತೆ ಮಾತನಾಡಿದ್ದಾರೆ. ಹಾಗಾಗಿ…