ಆರೋಗ್ಯಕರ ಜೀವನಶೈಲಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ; ಡಾ. ಈ.ಸಿ. ನಿಂಗರಾಜ್ ಗೌಡ
ಮೈಸೂರು: ದೇಹ ಮತ್ತು ಮನಸ್ಸಿನ ಆರೋಗ್ಯವನ್ನು ಸಮತೋಲನದಲ್ಲಿಟ್ಟುಕೊಳ್ಳಲು ಆರೋಗ್ಯಕರ ಜೀವನಶೈಲಿಯ ವಿಧಾನಗಳ ಬಗ್ಗೆಯೂ ಜನರಲ್ಲಿ ಅರಿವು ಮೂಡಬೇಕಿದೆ ಎಂದು ಬಿಜೆಪಿ ಮೈಸೂರು ವಿಭಾಗೀಯ ಸಹ ಪ್ರಭಾರಿ ಡಾ. ಈ.ಸಿ. ನಿಂಗರಾಜ್ ಗೌಡ ಹೇಳಿದರು.ಮೈಸೂರಿನ ಸಿದ್ಧಾರ್ಥ ಲೇಔಟ್ನಲ್ಲಿ ಆರ್ವಿಕಾ ವೆಲ್ನೆಸ್ ಸೆಂಟರ್ನ ಎರಡನೇ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಆರೋಗ್ಯದ ಬಗ್ಗೆ ಜನರು ಮುನ್ನೆಚ್ಚರಿಕೆ ವಹಿಸುವುದು ಇಂದಿನ ಅಗತ್ಯವಾಗಿದೆ. ದೇಹಕ್ಕೆ ಸಮರ್ಪಕ ವಿಶ್ರಾಂತಿ, ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ, ಉತ್ತಮ ನಿದ್ರೆ ಹಾಗೂ ಮಾನಸಿಕ ನೆಮ್ಮದಿ ಆರೋಗ್ಯಕರ ಜೀವನದ…