ನಿವಾಸಿಗಳಿಗೆ ಮಣ್ಣಿನ ಗೌರಿ ಗಣೇಶ ಮೂರ್ತಿ ವಿತರಣೆ
ಮೈಸೂರು: ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡರವರು ವಾರ್ಡ್ ನಂ. 23ರ ಕುರುಬಗೆರೆ ಅರಳಿಕಟ್ಟೆ ದೇವಸ್ಥಾನದ ಮುಂಭಾಗ ಸ್ಥಳೀಯ ನಿವಾಸಿಗಳಿಗೆ ಉಚಿತವಾಗಿ ಮಣ್ಣಿನ ಗೌರಿ-ಗಣೇಶ ಮೂರ್ತಿಗಳನ್ನು ವಿತರಿಸಿ ಹಬ್ಬದ ಶುಭಾಶಯ ಕೋರಿದರು.ಬಳಿಕ ಮಾತನಾಡಿ, ಗೌರಿ-ಗಣೇಶ ಹಬ್ಬವು ನಮ್ಮ ಸಂಸ್ಕöÈತಿ, ಸಂಪ್ರದಾಯ ಮತ್ತು ಕುಟುಂಬ ಮೌಲ್ಯಗಳನ್ನು ಪ್ರತಿಬಿಂಬಿಸುವ ಹಬ್ಬವಾಗಿದೆ. ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮೂರ್ತಿಗಳ ಬದಲಾಗಿ ಮಣ್ಣಿನ ಮೂರ್ತಿಗಳನ್ನು ಬಳಸಬೇಕು ಎಂದು ತಿಳಿಸಿದರು.ಮಣ್ಣಿನ ಮೂರ್ತಿಗಳ ಬಳಕೆಯಿಂದ…