42 ರೈತ ಕುಟುಂಬಗಳ ಮಕ್ಕಳ ಉದ್ಯೋಗಕ್ಕಾಗಿ ಹೋರಾಟ
ಮೈಸೂರು: ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಗೆ ಭೂಮಿ ನೀಡಿದ 42 ರೈತ ಕುಟುಂಬಗಳ ಮಕ್ಕಳಿಗೆ ಕಾಯಂ ಉದ್ಯೋಗ ನೀಡಬೇಕು ಹಾಗೂ ನೀಡಿರುವ ಲಿಖಿತ ಭರವಸೆಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ರೈತರು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ಮತ್ತು ಜನಾಂದೋಲನಗಳ ಮಹಾ ಮೈತ್ರಿಯ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಹೋರಾಟವನ್ನು ನಡೆಸಲಾಗುತ್ತಿದೆ.ಐದು ದಿನಗಳಿಂದ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದರೂ ಜಿಲ್ಲಾಡಳಿತವು ರೈತರ ಬೇಡಿಕೆಗಳಿಗೆ ಸ್ಪಂದಿಸಿಲ್ಲ ಎಂದು ಹೋರಾಟಗಾರರು…