ರೈತರ ಸಂಕಷ್ಟ ಪರಿಸ್ಥಿತಿಯಲ್ಲಿ ಸರ್ಕಾರ ರೈತರ ಜೊತೆ ನಿಲ್ಲಬೇಕು : ಬ್ಲೂ ಇಂಡಿಯಾ ಪಕ್ಷದ ಅಧ್ಯಕ್ಷ ರಾಜಶೇಖರ್ ದೊಡ್ಡಣ್ಣ ಮೌರ್ಯ
ಪಿರಿಯಾಪಟ್ಟಣ : ಅನಾವಷ್ಟಿಯ ಪರಿಣಾಮವಾಗಿ ಬಿತ್ತಿದ ಬೆಳೆ ಕೈ ಕೊಟ್ಟರೂ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಪಿರಿಯಾಪಟ್ಟಣವನ್ನು ಬರ ಪೀಡಿತ ತಾಲ್ಲೂಕಿನ ಪಟ್ಟಿಯಿಂದ ಹೊರ ಹಾಕಲಾಗಿದೆ ಎಂದು ಬ್ಲೂ ಇಂಡಿಯಾ ಪಾರ್ಟಿ ರಾಜ್ಯಾಧ್ಯಕ್ಷ ರಾಜಶೇಖರ ದೊಡ್ಡಣ್ಣ ಮೌರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದ ಕಾರ್ಯನಿರತ ಪತ್ರಕರ್ತರ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಉದ್ದೇಶಿಸಿ ಮಾತನಾಡಿದ ಅವರು ಮೈಸೂರಿನ ಎಂಟು ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಿ, ಪಿರಿಯಾಪಟ್ಟಣವನ್ನು ಹೊರತು ಪಡೆಸಿರುವುದು ಮಲತಾಯಿ ಧೋರಣೆಯಾಗಿದೆ ತಾಲೂಕಿನಲ್ಲಿ ಬರ ಬಂದು ರೈತರು ಸಂಕಷ್ಟ ಪರಿಸ್ಥಿತಿಯಲ್ಲಿ ಇದ್ದಾರೆ ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ…